ನಳಿನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ: ರಾಜ್ಯ ಬಿಜೆಪಿ ಸ್ಪಷ್ಟನೆ!

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ನಳೀನ್ ಕುಮಾರ್ ಕಟೀಲ್
ನಳೀನ್ ಕುಮಾರ್ ಕಟೀಲ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಅವರು ಇದೀಗ ತಾವು ರಾಜಿನಾಮೆ ನೀಡಿಲ್ಲ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಬಳ್ಳಾರಿಯಲ್ಲಿ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ನಳೀನ್ ಕುಮಾರ್ ಕಟೀಲ್ ಇದೀಗ ಮಾಧ್ಯಮ ಪ್ರಕಟಣೆ ನೀಡಿ ಅಲ್ಲಿ ತಾವು ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಮಾಧ್ಯಮಗಳ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಏನಿದು ಗೊಂದಲ?
ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡರೂ ನೈತಿಕ ಹೊಣೆ ಹೊತ್ತು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಾಜಿನಾಮೆ ಸಲ್ಲಿಸಿರಲಿಲ್ಲ. ಈಗ ಹೊಸಬರ ನೇಮಕ ಖಚಿತವಾಗುತ್ತೆ, ಇವರನ್ನು ಕಿತ್ತು ಹಾಕುತ್ತಾರೆ ಎನ್ನುವಾಗ ರಾಜಿನಾಮೆ ನೀಡಿದ್ದಾರೆ ಎಂಬ ಸುದ್ದಿ ಹರಡಿದೆ.  ಇದಕ್ಕೆ ಇಂಬು ನೀಡುವಂತೆ ಸ್ವತಃ ನಳೀನ್ ಕುಮಾರ್ ಕಟೀಲ್ ಅವರೇ ಬಳ್ಳಾರಿಯ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರಾಜಿನಾಮೆ ನೀಡಿದ್ದೇನೆ.. ಮೌಖಿಕವಾಗಿಯೂ ಹೇಳಿದ್ದೇನೆ ಎಂದು ಹೇಳಿದ್ದ ವಿಡಿಯೋ ವೈರಲ್ ಆಗಿತ್ತು. 

ಈ ಕುರಿತ ಸುದ್ದಿಗಳು ವ್ಯಾಪಕವಾದಂತೆಯೇ ಈ ಬಗ್ಗೆ ರಾಜ್ಯ ಬಿಜೆಪಿ ಪತ್ರಿಕಾ ಪ್ರಕಟಣೆ ಮೂಲಕ ಈ ಬಗ್ಗೆ ಸ್ಪಷ್ಟನೆ ನೀಡಿದೆ.  ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜಿನಾಮೆ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದು, 'ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜಿನಾಮೆ ನೀಡಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಈ ಕುರಿತ ಸುದ್ದಿಗಳು ಸತ್ಯಕ್ಕೆ ದೂರವಾದದ್ದು ಎಂದು ಕಟೀಲ್ ತಿಳಿಸಿದ್ದಾರೆ. ಸೋಮಣ್ಣ ರಾಜ್ಯಾಧ್ಯಕ್ಷ ಆಕಾಂಕ್ಷೆ ಪ್ರಕಟಿಸಿದ ಕುರಿತು ಕೇಳಿದ ಪ್ರಶ್ನೆಗೆ ಅವರು ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದರು. 

ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಪಕ್ಷವು ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಮಾಡಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜಿನಾಮೆ ನೀಡಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಕಟೀಲ್ ಹೇಳಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com