ಕಾಂಗ್ರೆಸ್ ಗ್ಯಾರಂಟಿ ಯೋಜನೆ: ಭರವಸೆ ಈಡೇರಿಸದಿದ್ದರೆ ವಿಧಾನಸೌಧದಲ್ಲಿ ಪ್ರತಿಭಟನೆ: ಬಿಜೆಪಿ

ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಎಲ್ಲಾ 5 ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಇಲ್ಲದಿದ್ದರೆ, ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಎಲ್ಲಾ 5 ಭರವಸೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಬೇಕು. ಇಲ್ಲದಿದ್ದರೆ, ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಬಿಜೆಪಿ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ‌ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸರ್ಕಾರ ಎಲ್ಲಾ 5 ಭರವಸೆಗಳನ್ನು ಈಡೇರಿಸಬೇಕು. ಇಲ್ಲವೇ ಅಧಿಕಾರವನ್ನು ತ್ಯಜಿಸಬೇಕೆಂದು ಹೇಳಿದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಕಾಂಗ್ರೆಸ್‌ನ ಭರವಸೆಗಳೇ ಕಾರಣ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಮೇಲೆ ವಿಶ್ವಾಸವಿಟ್ಟು ಜನರು ಮತ ಹಾಕಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಗಾಗಿ ಇದೀಗ ಕಾಯುತ್ತಿದ್ದಾರೆ. ಕಾಂಗ್ರೆಸ್‌ನವರು ನುಡಿದಂತೆ ಗ್ಯಾರಂಟಿಗಳನ್ನು ಕೊಡಲಿ. ಉಚಿತ ಗ್ಯಾರಂಟಿ ಕೊಡುವರೆಗೂ ಬಿಜೆಪಿಯಿಂದ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ಚುನಾವಣೆಯಲ್ಲಿ ಬಿಜೆಪಿ ಸೋಲಾಗಲು ಅವರು ಮನೆ ಮನೆಗೆ ಹೋಗಿ ಕೊಟ್ಟ ಗ್ಯಾರಂಟಿ ಕಾರ್ಡ್ ಕಾರಣ. ಜನ ಅದನ್ನು ನಂಬಿ ಬಿಟ್ಟರು‌. ಬಿಜೆಪಿ ಕಾರ್ಯಕರ್ತರು ಎದೆಗುಂದಬೇಕಾಗಿಲ್ಲ, ಮತ್ತೊಮ್ಮೆ ಎದ್ದೇಳಬೇಕಾಗಿದೆ. ಸುಳ್ಳು ಭರವಸೆಗಳ ವಿರುದ್ಧ ಆಂದೋಲನ ಮಾಡಬೇಕಾಗಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಗಳಿಸಬೇಕಾಗಿತ್ತು, ಅದು ಆಗಲಿಲ್ಲ. ಮುಂದಿನ ದಿನಗಳಲ್ಲಿ ಬಿಬಿಎಂಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದಲ್ಲಿ ಅಧಿಕಾರಕ್ಕೆ ಬರಬೇಕಿದೆ. ನಾವು ಎಲ್ಲರೂ ಆ ದಿಕ್ಕಿನಲ್ಲಿ ಪ್ರಯತ್ನ ಮಾಡಬೇಕು ಎಂದು ಕರೆಕೊಟ್ಟರು.

ಶುಕ್ರವಾರ ಪಾಟ್ನಾದಲ್ಲಿ ಪ್ರಧಾನಿ ಮೋದಿಯವರನ್ನು ಅಧಿಕಾರದಿಂದ ಇಳಿಸಲು ಏನೇನು ಮಾಡಬಹುದು ಎಂದು ಚರ್ಚೆ ನಡೆಸಿದ್ದಾರೆ. ನೀವು ಮುಂದಿನ ಚುನಾವಣೆಯಲ್ಲಿ ಮೋದಿಯವರನ್ನು ಅವಿರೋಧವಾಗಿ ಆಯ್ಕೆ ಮಾಡೋಣ ಎಂದು ಹೇಳಬೇಕಾಗಿತ್ತು. ನಿಮ್ಮ ಯೋಗ್ಯತೆಗೆ ಅದು ಆಗಲಿಲ್ಲ. ಸೂರ್ಯ ಚಂದ್ರರಿರುವವರೆಗೆ ಮತ್ತೊಮ್ಮೆ ಮೋದಿ ಪ್ರಧಾನಿ ಆಗುವುದು ಸತ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನ ಗೆಲ್ಲುವ ಮೂಲಕ ಮೋದಿಗೆ ನಾವು ಕೊಡುಗೆ ನೀಡಬೇಕಿದೆ. ಸಾಮಾನ್ಯ ಜನ ಬಿಲ್ ಕಟ್ಟೋಕೆ ಆಗದ ರೀತಿ ಬಿಲ್ ಜಾಸ್ತಿ ಮಾಡಿದ್ದಾರೆ. ಕೈಗಾರಿಕಾ ಉದ್ಯಮಗಳು ಮುಚ್ಚುವ ರೀತಿಗೆ ಬಂದಿದೆ.‌ಗೋಹತ್ಯೆ ನಿಷೇದ ಕಾಯ್ದೆ ರದ್ದು ಮಾಡ್ತೇವೆ ಎಂದು ಹೇಳ್ತಾ ಇದ್ದಾರೆ.‌ಅದಕ್ಕೆ ನಾವು ಅವಕಾಶ ನೀಡಬಾರದು ಎಂದರು.

ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹೋಗಬೇಕು ಎಂದು ತೀರ್ಮಾನ ಮಾಡಿದ್ದೇನೆ. ಕಾಂಗ್ರೆಸ್ ಬಣ್ಣ ಬಯಲು ಮಾಡಬೇಕಾಗಿದೆ. ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣ ಮುಗಿದ ಬಳಿಕ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ನಾನು ಧರಣಿ ಕುಳಿತುಕೊಳ್ಳುತ್ತೇನೆ, ಗ್ಯಾರಂಟಿಗಳನ್ನು ಕೊಡೋವರೆಗೂ ಸತ್ಯಾಗ್ರಹ ಮಾಡುತ್ತೇವೆ.‌ ಅಧಿವೇಶನದ ಒಳಗೆ ನಮ್ಮ ಶಾಸಕರಿಂದ ಹೋರಾಟ ನಡೆಯಲಿದೆ. ಗಾಂಧಿ ಪ್ರತಿಮೆ ಬಳಿ ನಾನು ನಮ್ಮ ಮುಖಂಡರ ಜತೆ ಸತ್ಯಾಗ್ರಹ ಮಾಡುತ್ತೇನೆಂದು ಎಚ್ಚರಿಕೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com