ಸತೀಶ್ ಜಾರಕಿಹೊಳಿ ಸಿಎಂ ಆಗಬೇಕೆಂಬುದು ಸಮುದಾಯದ ಹೆಬ್ಬಯಕೆ: ಸಚಿವ ಕೆ.ಎನ್ ರಾಜಣ್ಣ

ನನಗೆ ಮುಖ್ಯಮಂತ್ರಿಯಾಗುವ ಅಭಿಲಾಷೆ ಇಲ್ಲ. ಆದರೆ, ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಆಸೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಂಗಳೂರು: ನನಗೆ ಮುಖ್ಯಮಂತ್ರಿಯಾಗುವ ಅಭಿಲಾಷೆ ಇಲ್ಲ. ಆದರೆ, ನಮ್ಮ ಸಮಾಜದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಆಸೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿರುವ ಪರಿಶಿಷ್ಟ ಪಂಗಡದ ನಾಯಕ ಸಮುದಾಯದ ಮುಖಂಡರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಿಎಂ ಸ್ಥಾನ ಕೊಡಿಸುವ ಹುನ್ನಾರ ನಡೆಸಿದ್ದಾರೆ.

ತುಮಕೂರಿನಲ್ಲಿ ನಡೆದ ವಾಲ್ಮೀಕಿ ಸಮುದಾಯದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ನಾಯಕ ಸಮುದಾಯದವರು ಕೆಲವರು ಬಂದಿಲ್ಲ ಎಂದರೆ ಅವರು ನಮ್ಮ ಸಮಾಜದ ಪರವಾಗಿಲ್ಲ ಅಂತಲ್ಲ. ಅವರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಇದ್ದಾರೆ ಎಂದರು.

ಮೊದಲ ಬಾರಿಗೆ ಸಮುದಾಯದ  ಮೂವರು ಸಚಿವರಾಗಿದ್ದು, ಸತೀಶ್ ಜಾರಕಿಹೊಳಿ ಅವರು ಸಿಎಂ ಸ್ಥಾನಕ್ಕೆ ಅರ್ಹರು ಎಂದು ಹೇಳಿದರು. ನಂತರ ಸುದ್ದಿಗಾರರ ಮುಂದೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿ, ಸಮುದಾಯದವರು ತಮಗೆ ಈಗ ಉನ್ನತ ಹುದ್ದೆ ನೀಡಬೇಕೆಂದು ಒತ್ತಾಯಿಸಿಲ್ಲ, ಮುಂದೆ ಅವಕಾಶ ಬಂದರೆ  ಆಗಬೇಕು ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಪೂಜ್ಯ ಸ್ವಾಮೀಜಿಯವರು ತಮ್ಮ ಆಶೀರ್ವಚನದಲ್ಲಿ ಸಮುದಾಯದ ಬೇಡಿಕೆಗಳನ್ನು ತಿಳಿಸಿದ್ದಾರೆ. ಆ ಅನಿಸಿಕೆಗಳನ್ನ ಈಡೇರಿಸುವ ಬಗ್ಗೆ ಸತೀಶ್ ಜಾರಕಿಹೊಳಿ ಮಾತನಾಡಿದ್ದಾರೆ. ಮುಖ್ಯಮಂತ್ರಿ ಅವರನ್ನ ಭೇಟಿ ಮಾಡಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವ ಭರವಸೆಯಿದೆ. 2008ರ ವಿಧೇಯಕದಿಂದ ಹೆಚ್ಚಿನ ಶಾಸಕರು ಆಯ್ಕೆಯಾಗಲು ಸಾಧ್ಯವಾಗಿದೆ ಎಂದರು.

ಮೇ 13 ರಂದು ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಎಸ್‌ಟಿ ನಾಯಕ ಮುಖಂಡರು ಡಿಸಿಎಂ ಹುದ್ದೆಗೆ ಲಾಬಿ ನಡೆಸಿದ್ದರು. ಮತ್ತು ಎರಡೂವರೆ ವರ್ಷಗಳ ನಂತರ ಡಿಸಿಎಂ ಹುದ್ದೆಗಾಗಿ ಕಾಂಗ್ರೆಸ್ ಹೈಕಮಾಂಡ್ ರ ನಡುವೆ ಒಪ್ಪಂದ ಮಾಡಿಕೊಂಡಿರಬಹುದು ಎಂದು ಹೇಳಲಾಗಿದೆ. ಸಿದ್ದರಾಮಯ್ಯನವರ ಬೆಂಬಲದೊಂದಿಗೆ ಸತೀಶ್ ಅವರು ಉನ್ನತ ಹುದ್ದೆಗೇರಬಹುದು ಎಂದು ರಾಜಕೀಯ ಪಂಡಿತರು ಅಭಿಪ್ರಾಯಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com