ವಿಧಾನ ಪರಿಷತ್‌ ಚುನಾವಣೆ: ಟಿಕೆಟ್‌ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದ ಕಾಂಗ್ರೆಸ್

ಇತ್ತೀಚಿಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.
ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಬೆಂಗಳೂರು: ಇತ್ತೀಚಿಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಈಗ ವಿಧಾನ ಪರಿಷತ್ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿದ್ದು, ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.

ವಿಧಾನ ಪರಿಷತ್‌ನ ಆರು ಕ್ಷೇತ್ರಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದ್ದು, ಕೆಪಿಸಿಸಿ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನಿಸಿದೆ.

ಶಿಕ್ಷಕರ ಕ್ಷೇತ್ರದ ಮೂರು ಸ್ಥಾನ, ಪದವೀಧರ ಕ್ಷೇತ್ರದ ಮೂರು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಸ್ಪರ್ಧಿಸಿಲು ಇಚ್ಚಿಸುವವರು ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಟಿಕೆಟ್‌ಗೆ ಅರ್ಜಿ ಹಾಕಬೇಕು. ಅರ್ಜಿ ಶುಲ್ಕ 5,000 ರೂ., ಪಕ್ಷದ ‌ನಿಧಿ 2,00,000 ರೂ. ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com