ಅಮಿತ್ ಮಾಳವಿಯಾ ವಿರುದ್ಧದ ಎಫ್‌ಐಆರ್ ರಾಜಕೀಯ ಪ್ರೇರಿತ: ಕಾಂಗ್ರೆಸ್ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ

ಬೆಂಗಳೂರು: ಜೆಪಿ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಎಫ್ಐಆರ್ ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಅಮಿತ್ ಮಾಳವೀಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಇದು ರಾಜಕೀಯ ಪ್ರೇರಿತವಾಗಿದೆ. ರಾಹುಲ್ ಗಾಂಧಿ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಐಪಿಸಿ 153ಎ ಮತ್ತು 505(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಎರಡೂ ಸೆಕ್ಷನ್ ಗಳು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವವರ ವಿರುದ್ಧ ಈ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಹಾಗಾದರೆ, ರಾಹುಲ್ ಗಾಂಧಿ ಏನು? ಒಬ್ಬ ವ್ಯಕ್ತಿಯೇ ಅಥವಾ ಗುಂಪು ಅಥವಾ ವರ್ಗವೇ? ಪ್ರಕರಣದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುತ್ತೇವೆ. ನ್ಯಾಯಕ್ಕಾಗಿ ಹೋರಾಟ ಮಾಡುತ್ತೇವೆಂದು ಹೇಳಿದ್ದಾರೆ.

ಜೂನ್ 17ರಂದು ಆ್ಯನಿಮೇಟೆಡ್ ವೀಡಿಯೋದಲ್ಲಿ ಕಾಂಗ್ರೆಸ್ ಪಕ್ಷ ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಉಲ್ಲೇಖಿಸಿ ರಾಹುಲ್ ಗಾಂಧಿ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ವೀಡಿಯೋ ಹರಿಬಿಡಲಾಗಿತ್ತು.

ಈ ವಿಡಿಯೋ ವಿರುದ್ಧ  ಜೂ.19 ರಂದು ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಸಿಸಿ ವಕ್ತಾರ ರಮೇಶ್ ಬಾಬು ದೂರು ಸಲ್ಲಿಕೆ ಮಾಡಿದ್ದರು.

ಈ ದೂರಿನ ಅನ್ವಯ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಅಮಿತ್ ಮಾಳವೀಯ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com