ಮೈಸೂರು: ಮೈಸೂರು ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿನ ಒಳಜಗಳ ಮತ್ತೆ ಬಯಲಾಗಿದ್ದು, ವಿಧಾನಸಭಾ ಚುನಾವಣೆಯಲ್ಲಿ ತನ್ನ ಸೋಲಿಗೆ ಕಾಂಗ್ರೆಸ್ ನಾಯಕ ಪ್ರದೀಪ್ ಕುಮಾರ್ ಅವರೇ ಕಾರಣ ಎಂದು ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಆರೋಪಿಸಿದ್ದಾರೆ.
ಈ ಕುರಿತಂತೆ ಮಾತನಾಡಿದ ಪ್ರದೀಪ್ ಕುಮಾರ್, ಇತಹ ಆಕಾಂಕ್ಷಿ ಕಾರ್ಯಕರ್ತರಂತೆ ತಾನೂ ಕೂಡಾ ಟಿಕೆಟ್‌ಗಾಗಿ ಪ್ರಯತ್ನಿಸಿದ್ದೇನೆ ಆದರೆ ಯಾವುದೇ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಲ್ಲ . ಅವರ ಸೋಲಿಗೆ ನನ್ನನ್ನು ದೂಷಿಸುವುದು ಅವರ ಹತಾಶೆಯನ್ನು ತೋರಿಸುತ್ತದೆ" ಎಂದು ಹೇಳಿದರು.
ಎರಡು ದಿನಗಳ ಹಿಂದಷ್ಟೇ ಮಾತನಾಡಿದ ಕೆಆರ್ ವಿಧಾನಸಭಾ ಕ್ಷೇತ್ರದ ಮತ್ತೋರ್ವ ಟಿಕೆಟ್ ಆಕಾಂಕ್ಷಿಯಾಗಿದ್ದ ನವೀನ್ ಕುಮಾರ್, ಸೋಮಶೇಖರ್ ಅವರ ಗೆಲುವಿಗೆ ಶ್ರಮಿಸಿದ್ದೇ. ಆದರೂ ಅವರು ಸೋತರು. ಆದರೆ ಅವರು ನನ್ನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಮುಖ್ಯಸ್ಥರು ತನಿಖೆ ನಡೆಸಲಿ ಎಂದರು.
Advertisement