ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ: ಮಾರ್ಚ್ 4 ರಿಂದ ಕಲ್ಯಾಣ ಯೋಜನೆ ಫಲಾನುಭವಿಗಳ ಸಮಾವೇಶ ನಡೆಸಲು ಮುಂದು!

ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದು, ಮಾರ್ಚ್ 4 ರಿಂದ ಮಾರ್ಚ್ 20 ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನಡೆಸಲು ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆಗಳ ನಡೆಸುತ್ತಿದ್ದು, ಮಾರ್ಚ್ 4 ರಿಂದ ಮಾರ್ಚ್ 20 ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಕಲ್ಯಾಣ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ನಡೆಸಲು ಮುಂದಾಗಿದೆ.

ಮಾರ್ಚ್ 4 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೊದಲ ಸಮಾವೇಶವನ್ನು ಉದ್ಘಾಟಿಸಲಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರ ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗಣಿ ಮತ್ತು ಭೂವಿಜ್ಞಾನ ಸಚಿವ ಹಾಲಪ್ಪ ಆಚಾರ್, ಅಬಕಾರಿ ಸಚಿವ ಗೋಪಾಲಯ್ಯ, ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯಲ್ಲಿ ಸಾಧನೆ ಮಾಡಿದೆ ಎಂದು ಹೇಳಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ, ಲಂಬಾಣಿ ಸಮುದಾಯದ ಜನರಿಗೆ ಹಕ್ಕುಪತ್ರ ವಿತರಣೆ, ನೇಕಾರರಿಗೆ ಸಮ್ಮಾನ್ ಯೋಜನೆ, ಮಾತೃ ವಂದನಾ ಯೋಜನೆ, ಭಾಗ್ಯಲಕ್ಷ್ಮಿ/ಸುಕನ್ಯಾ ಸಮೃದ್ಧಿ ಮತ್ತು ಯಶಸ್ವಿಯಂತಹ ಯೋಜನೆಗಳ ಬಗ್ಗೆ ಮಾತನಾಡಿದರು. ಅಲ್ಲದೆ, ಈ ಯೋಜನೆ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ ಎಂದು ತಿಳಿಸಿದರು.

ಇದಲ್ಲದೆ, ಜನಸೇವಕ, ಗ್ರಾಮ ಒನ್ ಮತ್ತು ಭೂ ಪರಿವರ್ತನೆ ಮಸೂದೆಗೆ ತಿದ್ದುಪಡಿಗಳಂತಹ ಯೋಜನೆಗಳು ಲಕ್ಷಾಂತರ ಜನರಿಗೆ ಪರೋಕ್ಷವಾಗಿ ಪರಿಹಾರವನ್ನು ಒದಗಿಸಿವೆ ಎಂದರು.

ಮೀನುಗಾರರ ಆದಾಯ ಹೆಚ್ಚಿಸಲು 100 ಆಳ ಸಮುದ್ರ ಮೀನುಗಾರಿಕಾ ಬೋಟ್‌ಗಳನ್ನು ಬೆಂಬಲಿಸುವ ಉದ್ದೇಶದಿಂದ 'ಮತ್ಸ್ಯಸಿರಿ' ಯೋಜನೆಯಿಂದ 75 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ, ಕಟ್ಟಡ ಕಾರ್ಮಿಕರ 2.97 ಲಕ್ಷ ಮಕ್ಕಳಿಗೆ ರೂ.462.12 ಕೋಟಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ಸಮಾವೇಶದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೇಂದ್ರ ಸಚಿವರು ಭಾಗವಹಿಸಲಿದ್ದು, ಫಲಾನುಭವಿಗಳು ತಮ್ಮ ಕುಂದುಕೊರತೆಗಳನ್ನು ಹೇಳಿಕೊಳ್ಳಲು ಸಮಾವೇಶ ವೇದಿಕೆ ಕಲ್ಪಿಸಿಕೊಡದಲಿದೆ. ಫಲಾನುಭವಿಗಳು ಹೇಳಿಕೊಳ್ಳುವ ಸಮಸ್ಯೆಗಳ ಪರಿಹರಿಸಲು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com