ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆ

ಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜನಾಮೆಗೆ ಒತ್ತಾಯಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ, ಬಸವರಾಜ ಬೊಮ್ಮಾಯಿ ಸಿಎಂ ಸ್ಥಾನಕ್ಕೆ ರಾಜೀನಾಮೆಗೆ ಇದು ಸೂಕ್ತ ಸಮಯವಾಗಿದೆ. ಅವರು ದೊಡ್ಡ ಕೆಲಸ ಮಾಡಬೇಕೆಂದು ಭಾವಿಸಿದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಲಿ ಎಂದರು. 

ಇದೀಗ ಸಿಬಿಐ, ಐಟಿ, ಇಡಿ ಏಲ್ಲಿವೆ? ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಮಿಸ್ಟರ್ ಅಮಿತ್ ಶಾ ಬರುತ್ತಿದ್ದಾರೆಯೇ? ಸರಿ ಅವರ ತಂಡವನ್ನು ಕರೆದುಕೊಂಡು ಬರಬೇಕು ಎಂದು ಒತ್ತಾಯಿಸಿದರು. ಶೇಕಡಾ 40 ರಷ್ಟು ಕಮಿಷನ್ ಗೆ ದಾಖಲೆ ಕೊಡಿ ಎಂದು ಕೇಳುವ ಸಿಎಂಗೆ ಇನ್ನೆಷ್ಟು ದಾಖಲೆಗಳ ಅಗತ್ಯವಿದೆ. ಎಲ್ಲವೂ ಬಿಜೆಪಿ ಶಾಸಕರ ಮನೆ ಮತ್ತು ಸಚಿವರ ಕಚೇರಿಯಲ್ಲಿಯೇ ಪತ್ತೆಯಾಗಿರುವುದಾಗಿ ಪ್ರಿಯಾಂಕ್ ಖರ್ಗೆ ಹೇಳಿದರು. 

ಲೋಕಾಯುಕ್ತ ದಾಳಿಯಲ್ಲಿ ಕಮಿಷನ್ ಕರ್ಮಕಾಂಡಕ್ಕೆ ದಾಖಲೆ ಸಿಕ್ಕಿತಲ್ಲವೇ? ಇದು ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಸಾಕ್ಷಿಯಲ್ಲವೇ? ಈಗ ಭ್ರಷ್ಟಾಚಾರಕ್ಕೆ ಹೊಣೆ ಹೊತ್ತು ರಾಜೀನಾಮೆ ಕೊಡಿ ಎಂದು ಅವರು ಆಗ್ರಹಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com