ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಇಡೀ ದೇಶದ ಜನರ ಮನಸ್ಥಿತಿಯ ಪ್ರತೀಕ: ಬಸವ ಕಲ್ಯಾಣದಲ್ಲಿ ಅಮಿತ್ ಶಾ

ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇರುವಂತೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.
ಬಸವ ಕಲ್ಯಾಣದಲ್ಲಿ ಅಮಿತ್ ಶಾ
ಬಸವ ಕಲ್ಯಾಣದಲ್ಲಿ ಅಮಿತ್ ಶಾ
Updated on

ಬಸವ ಕಲ್ಯಾಣ: ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಹಾಗೂ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಮೂರು ತಿಂಗಳು ಬಾಕಿ ಇರುವಂತೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರವನ್ನು ಆರಂಭಿಸಿದ್ದಾರೆ.

ಬೀದರ್ ಜಿಲ್ಲೆ ಬಸವ ಕಲ್ಯಾಣದಲ್ಲಿಂದು ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅಮಿತ್ ಶಾ, ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ, ಕೇವಲ ಆ ರಾಜ್ಯಗಳ ಜನರ ಮನಸ್ಥಿತಿ ಮಾತ್ರವಲ್ಲ, ಇಡೀ ದೇಶದ ಜನರ ಮನಸ್ಥಿತಿಯನ್ನು ಸ್ಪಷ್ಟವಾಗಿ ತೋರಿಸಿದೆ. ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನರು ಯಾವ ರೀತಿ ತಿರಸ್ಕರಿಸಿದರು ಎಂಬುದನ್ನು ಇಡೀ ದೇಶದ ಜನರು ನೋಡಿದ್ದಾರೆ ಎಂದರು. 

ನಿಂದಿಸುವ ಮೂಲಕ ಬಿಜೆಪಿ ಮತ್ತು ಪ್ರಧಾನಿಗೆ ಅಪಖ್ಯಾತಿ ತರಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಆದರೆ, ನಿಂದನೆ ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರನ್ನು ಮತ್ತಷ್ಟು ಪ್ರಬಲರನ್ನಾಗಿ ಮಾಡಲಿದೆ. ನರೇಂದ್ರ ಮೋದಿ ಏನು, ಅವರು ಹೇಗೆ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂಬುದು ದೇಶದ ಜನರಿಗೆ ಗೊತ್ತಿದೆ. ದೇಶದ 130 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಯಶಸ್ವಿಯಾಗಿ ಕೋವಿಡ್-19 ನಿಯಂತ್ರಿಸಲಾಗಿದೆ. ನೆರೆಯ ರಾಷ್ಟ್ರಗಳು ಆರ್ಥಿಕ ಬಿಕ್ಕಟ್ಟಿನಲ್ಲಿ ಬಳಲುತ್ತಿದ್ದರೆ, ನಮ್ ದೇಶ ಅದರಿಂದ ಹೊರಬಂದಿದೆ ಎಂದು ಹೇಳಿದರು. 

ಕಾಂಗ್ರೆಸ್ ವಿರುದ್ಧ ವಾಗ್ದಾಳಿ: ರಾಜ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಕಾಂಗ್ರೆಸ್ ನಲ್ಲಿ ಒಂದು ಸಿಎಂ ಕುರ್ಚಿಗಾಗಿ 10 ಜನ ನಾಯಕರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದರೆ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ನಡುವೆ ಶೀತಲ ಸಮರ ನಡೆಯುತ್ತಿದೆ. ಇವರು ಕರ್ನಾಟಕಕ್ಕೆ ಒಳಿತನ್ನು ಕೊಡಲು ಸಾಧ್ಯವೇ ಎಂದು ಪ್ರಶ್ನಿಸಿದ ಅಮಿತ್ ಶಾ, ಸಿದ್ದರಾಮಯ್ಯ ಸರ್ಕಾರ ಕಾಂಗ್ರೆಸ್ ಹೈಕಮಾಂಡ್ ಎಟಿಎಂ ಆಗಿತ್ತು ಎಂದು ಆರೋಪಿಸಿದರು. ವಿಕಾಸ ವಿರೋಧಿ ಕಾಂಗ್ರೆಸ್ ಸೋಲಿಗೆ ಸಂಕಲ್ಪ ಕಲ್ಯಾಣ ಕರ್ನಾಟಕದ ಜನತೆಯದಾಗಲಿ ಎಂದು ಮನವಿ ಮಾಡಿದರು.

ರಾಣಿ ಅಬ್ಬಕ್ಕ, ನಾಡ ಪ್ರಭು ಕೆಂಪೇಗೌಡರಿಗೆ ಅವರನ್ನು ಗೌರವಿಸುವ ಮೂಲಕ ಕರ್ನಾಟಕದ ಸಂಸ್ಕೃತಿಯನ್ನು ಬಿಜೆಪಿ ಗೌರವಿಸುತ್ತಿದ್ದರೆ, ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿದೆ.  ರಾಹುಲ್ ಗಾಂಧಿ ನಾಯಕತ್ವದ ಕಾಂಗ್ರೆಸ್ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ,ದೆಹಲಿ ಕುಟುಂಬದ ಎಟಿಎಂನಂತೆ ವರ್ತಿಸಿದರು ಎಂದು ಆರೋಪಿಸಿದ ಅವರು, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ, ರಾಜ್ಯದ ಕಾಂಗ್ರೆಸ್ ನಾಯಕರನ್ನು ಅಪಮಾನಿಸಿದ್ದಾರೆ. ಇಂದಿರಾಗಾಂಧಿ ಎಸ್, ನಿಜಲಿಂಗಪ್ಪ ಅವರನ್ನು ಅಪಮಾನಿಸದರೆ, ರಾಜೀವ್ ಗಾಂಧಿ ವಿರೇಂದ್ರ ಪಾಟೀಲ್ ಅವರನ್ನು ಅಪಮಾನಿಸಿದ್ದರು ಎಂದರು. 

 ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಕುಟುಂಬವಾದವನ್ನು ಪೋಷಿಸುವ ಪಕ್ಷಗಳು. ಜೆಡಿಎಸ್ ಗೆ ಕೊಡುವ ಮತ ಕಾಂಗ್ರೆಸ್ ಗೆ ಕೊಟ್ಟ ಮತದಂತೆ ಎಂದ ಅವರು, ತುಕ್ಡೇ, ತುಕ್ಡೇ ಗ್ಯಾಂಗ್ ಬೆಂಬಲಿಸುವ, ಆತಂಕವಾದಕ್ಕೆ ಬೆಂಬಲ ನೀಡುವ ಕಾಂಗ್ರೆಸ್, ಮತ ಬ್ಯಾಂಕ್ ಪರವಾಗಿದೆ. ನಾವು ಮತ ಬ್ಯಾಂಕಿನ ಕಡೆ ಗಮನ ಕೊಡುತ್ತಿಲ್ಲ. ನಮಗೆ ದೇಶದ ಸುರಕ್ಷತೆ ಮುಖ್ಯ ಎಂದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com