ಬಿಜೆಪಿ ಎಂಎಲ್ ಸಿ ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ

ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಪುಟ್ಟಣ್ಣ ಅವರು ಗುರುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಸಿ ಪುಟ್ಟಣ್ಣ
ಸಿ ಪುಟ್ಟಣ್ಣ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ ಪುಟ್ಟಣ್ಣ ಅವರು ಗುರುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದ್ದಾರೆ.

ಪುಟ್ಟಣ್ಣ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಇಂದು ಕೆಪಿಸಿಸಿ ಕಚೇರಿಯಲ್ಲಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಸೇರಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪುಟ್ಟಣ್ಣ, ವಿಧಾನ ಪರಿಷತ್ ಸಭಾಪತಿಯವರಿಗೆ ರಾಜೀನಾಮೆ ಪತ್ರ ನೀಡಿದ್ದೇವೆ. ಸರ್ಕಾರ ಶಿಕ್ಷಕರ ಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿಯ ಶಾಸಕರಾದ ಪುಟ್ಟಣ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ,ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ಗಮನಿಸಿ ಕಾಂಗ್ರೆಸ್ ಸೇರ್ಪಡೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com