ಕಾಂಗ್ರೆಸ್ ಲೋಕಾಯುಕ್ತ ಹಲ್ಲು ಕಿತ್ತು, ಎಸಿಬಿ ರಚಿಸಿತ್ತು: ಕೋಟಾ ಶ್ರೀನಿವಾಸ ಪೂಜಾರಿ

ಲಂಚ ಸ್ವೀಕಾರ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕೋಟಾ ಶ್ರೀನಿವಾಸ ಪೂಜಾರಿ ಗುರುವಾರ ತಳ್ಳಿ ಹಾಕಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ
ಕೋಟಾ ಶ್ರೀನಿವಾಸ ಪೂಜಾರಿ

ಬೆಂಗಳೂರು: ಲಂಚ ಸ್ವೀಕಾರ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಿಜೆಪಿ ರಕ್ಷಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಕೋಟಾ ಶ್ರೀನಿವಾಸ ಪೂಜಾರಿ ಗುರುವಾರ ತಳ್ಳಿ ಹಾಕಿದ್ದಾರೆ.

ವಿಧಾನಸೌಧದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಲೋಕಾಯುಕ್ತ ಸಂಸ್ಥೆಯನ್ನು ಹಲ್ಲನ್ನು ಕಿತ್ತು ಹಾಕಿ ಎಸಿಬಿ ರಚಿಸಿತ್ತು. ಬಿಜೆಪಿ ಸರ್ಕಾರ ಎಸಿಬಿಯನ್ನು ನಿಯಂತ್ರಿಸಿ ಲೋಕಾಯುಕ್ತವನ್ನು ಮರು ಆರಂಭಿಸಿದೆ. ಅದೇ ಲೋಕಾಯುಕ್ತ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರನ ವಿರುದ್ಧ ಅಕ್ರಮ ಆಸ್ತಿ ಸಂಪಾದನೆ ಕೇಸ್ ದಾಖಲಿಸಿದೆ ಎಂದರು.

ಲೋಕಾಯುಕ್ತ ಇತಿಹಾಸದಲ್ಲಿ ಆಡಳಿತಾರೂಢ ಪಕ್ಷದ ಶಾಸಕರ ವಿರುದ್ಧ ಇಂತಹ ಯಾವುದೇ ಕೇಸ್ ದಾಖಲಾಗಿರಲಿಲ್ಲ. ಈಗ ಲೋಕಾಯುಕ್ತ ಈ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆ ನಡೆಸುತ್ತಿದೆ. ಮಾಡಾಳ್ ವಿರೂಪಾಕ್ಷಪ್ಪಗೆ ಕೋರ್ಟ್ ಜಾಮೀನು ನೀಡಿದೆ ಎಂದು ಅವರು ಹೇಳಿದರು.

ಇದೇ ವೇಳೆ ಉಡುಪಿ ಕೃಷ್ಣ ಮಠದ ಆಸ್ತಿ ಮುಸ್ಲಿಂರಿಂದ ಕೊಡುಗೆಯಾಗಿ ನೀಡಲಾಗಿದೆ ಎಂಬ ಕಾಂಗ್ರೆಸ್ ಮುಖಂಡ ಮಿಥುನ್ ರೈ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಅವರಿಗೆ ವಸ್ತು ಸ್ಥಿತಿ ಗೊತ್ತಿಲ್ಲ ಅನಿಸುತ್ತದೆ. ತಮ್ಮ ಹೇಳಿಕೆಯನ್ನು ಹಿಂಪಡೆಯುವಂತೆ ನಾವು ಹೇಳಿದ್ದೇವೆ. ಈ ಸಂಬಂಧ ಮಠದ ಸ್ವಾಮೀಜಿ ಈಗಾಗಲೇ ಹೇಳಿಕೆ ನೀಡಿದ್ದಾರೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com