ಪ್ರತಾಪ್ ಸಿಂಹ ಏನು ಸಚಿವರಾ? ಕೇವಲ ಸಂಸದ ಅಷ್ಟೇ: ಸಿದ್ದರಾಮಯ್ಯ

ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ...
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಾರ್ಚ್ 12 ರಂದು ಉದ್ಘಾಟನೆಯಾಗಲಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಕ್ರೆಡಿಟ್ ವಾರ್ ಮುಂದುವರಿದಿದ್ದು, ಈ ಸಂಬಂಧ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪ್ರತಾಪ್ ಸಿಂಹ ಏನು ಸಚಿವರಾ? ಅವರು ಕೇವಲ ಒಬ್ಬ ಸಂಸದ ಅಷ್ಟೇ. ಈ ಹೆದ್ದಾರಿ ಪೂರ್ತಿ ಪ್ರತಾಪ್​ ಸಿಂಹ ಕ್ಷೇತ್ರದಲ್ಲಿ ಬರುತ್ತಾ? ಕಳಸವಾಡಿವರೆಗೆ ಮಾತ್ರ ಪ್ರತಾಪ್ ಸಿಂಹ ಕ್ಷೇತ್ರ ಬರುತ್ತೆ ಅಷ್ಟೇ. ಮಂಡ್ಯ, ರಾಮನಗರ ಜಿಲ್ಲೆಯಲ್ಲೂ ಈ ಹೆದ್ದಾರಿ ಹಾದುಹೋಗುತ್ತದೆ ಎಂದರು.

ನಾನು ಬೆಂಗಳೂರು-ಮೈಸೂರು ಹೆದ್ದಾರಿ ವೀಕ್ಷಿಸಲು ಹೋಗುತ್ತಿಲ್ಲ. ಮಾಜಿ ಸಚಿವ ಎಚ್​.ಸಿ.ಮಹದೇವಪ್ಪ ಅವರು ಹೆದ್ದಾರಿ ವೀಕ್ಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಅವರು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯನ್ನು ಉದ್ಘಾಟಿಸುವ ಮೊದಲು ಇಂದು ಸಿದ್ದರಾಮಯ್ಯ ಹೆದ್ದಾರಿ ವೀಕ್ಷಣೆ ಮಾಡಲು ಮುಂದಾಗಿದ್ದರು. ಆದರೆ ಎಐಸಿಸಿಯ ಸ್ಕ್ರೀನಿಂಗ್ ಕಮಿಟಿ ಗುರುವಾರ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಹೆದ್ದಾರಿ ವೀಕ್ಷಣೆಯ ಪ್ರವಾಸ ರದ್ದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com