ಬೆಂಗಳೂರು ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ; ಫಾಕ್ಸ್ಕಾನ್, ಐಫೋನ್ ಘಟಕಗಳು ನಗರಕ್ಕೆ ಬರುತ್ತವೆ ಎಂದ ಜೆ ಪಿ ನಡ್ಡಾ

ದೇಶದ ಐಟಿ ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಸ್ಥಾನಗಳನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಅದಕ್ಕಾಗಿ ತಂತ್ರ ಹೆಣೆಯುತ್ತಿದೆ. 
ಜೆ ಪಿ ನಡ್ಡಾ
ಜೆ ಪಿ ನಡ್ಡಾ

ಬೆಂಗಳೂರು: ದೇಶದ ಐಟಿ ರಾಜಧಾನಿ ಬೆಂಗಳೂರಿನ 28 ವಿಧಾನಸಭಾ ಸ್ಥಾನಗಳನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ಅದಕ್ಕಾಗಿ ತಂತ್ರ ಹೆಣೆಯುತ್ತಿದೆ. 

ನಿನ್ನೆ ಬೆಂಗಳೂರಿನ ಕೆಆರ್ ಪುರಂನಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ನಡ್ಡಾ, "ಸಮಗ್ರ ಅಭಿವೃದ್ಧಿಗೆ ಒಲವು ತೋರುವ ಏಕೈಕ ಪಕ್ಷ ಬಿಜೆಪಿ" ಎಂದು ಮತದಾರರಿಗೆ ಮನವರಿಕೆ ಮಾಡಲು ಹೊರಟರು. ಐಫೋನ್, ಫಾಕ್ಸ್ಕಾನ್ ಉತ್ಪಾದಕ ಕಂಪೆನಿಗಳು ಬೆಂಗಳೂರಿನಲ್ಲಿ ಘಟಕಗಳನ್ನು ಸ್ಥಾಪಿಸಲಿವೆ ಎಂದು ಹೇಳಿದರು. 

ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ಫಾಕ್ಸ್ಕಾನ್ ಇಲ್ಲಿಗೆ ಬರಲಿದೆ. ಆಧ್ಯಾತ್ಮಿಕತೆ, ವಿಜ್ಞಾನ ಮತ್ತು ತಂತ್ರಜ್ಞಾನದ ವಿಷಯದಲ್ಲಿ ಕರ್ನಾಟಕವು ಈ ದೇಶಕ್ಕೆ ಹೆಚ್ಚಿನ ಮಹತ್ವವನ್ನು ಹೊಂದಿದೆ. ಐಟಿ ರಾಜಧಾನಿಯಾಗಿರುವುದರಿಂದ, ಇದು ತನ್ನದೇ ಆದ ಪ್ರತಿಭೆ ಮತ್ತು ನಾವೀನ್ಯತೆಗಳನ್ನು ಹೊಂದಿದೆ ಎಂದು ಹೇಳಿದರು. 

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಉದ್ಘಾಟನೆ, ನಾಡಪ್ರಭು ಕೆಂಪೇಗೌಡರ 108 ಅಡಿ ಪ್ರತಿಮೆ ಅನಾವರಣ, ತುಮಕೂರಿನಲ್ಲಿ ಎಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಉದ್ಘಾಟಿಸಿದರು ಎಂದು ಸ್ಮರಿಸಿದರು.

ಭ್ರಷ್ಟಾಚಾರ ಮತ್ತು ವಂಶಾಡಳಿತದ ರಾಜಕೀಯಕ್ಕೆ ಬಂದಾಗ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದೇ ನಾಣ್ಯದ ಎರಡು ಮುಖಗಳು ಎಂದು ಕರೆದರು. ಲೋಕಾಯುಕ್ತ ದಾಳಿಯ ನಂತರ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಮಯದಲ್ಲಿ ಅವರ ಪ್ರತಿಕ್ರಿಯೆ ಬಂದಿದೆ, ಆದರೆ ರಾಜ್ಯ ಕಾನೂನು ಸಚಿವ ಜೆಸಿ ಮಾಧುಸ್ವಾಮಿ ಅವರು ಸರ್ಕಾರಕ್ಕೆ ಮುಜುಗರದ ಪ್ರಸಂಗವನ್ನು ಒಪ್ಪಿಕೊಂಡಿದ್ದಾರೆ.

ಕೆಲವು ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಇದ್ದಾರೆ. ಜೆಡಿಎಸ್ ಮತ್ತು ಕಾಂಗ್ರೆಸ್ ಭಾಯಿ-ಭಾಯಿ ಇದ್ದಂತೆ. ಜೆಡಿಎಸ್‌ಗೆ ಮತ ಹಾಕಿದರೆ ಕಾಂಗ್ರೆಸ್‌ಗೆ ವೋಟ್‌ ಹಾಕಿದಂತಾಗುತ್ತದೆ ಎಂದರು. ನಡ್ಡಾ ಅವರು ರಾಜ್ಯದ ಅಗಾಧ ಅಭಿವೃದ್ಧಿಗೆ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ಅವರ ಹಿಂದಿನ ಬಿಎಸ್ ಯಡಿಯೂರಪ್ಪ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com