ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಬಿಜೆಪಿಯ ಯಾವ ಶಾಸಕರೂ ಹೋಗಲ್ಲ: ಕೆ.ಎಸ್ ಈಶ್ವರಪ್ಪ

ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. 
ಕೆ.ಎಸ್ ಈಶ್ವರಪ್ಪ
ಕೆ.ಎಸ್ ಈಶ್ವರಪ್ಪ
Updated on: 

ಧರ್ಮಸ್ಥಳ: ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಹೇಳಿದರು. 

ವಿಜಯ ಸಂಕಲ್ಪ ಯಾತ್ರೆಗೆ ಮುನ್ನ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಕ್ಷಣೆ ಮಾಡುವ ಮತ್ತು ಸಂಘಟನೆ ಇರುವ ಬಿಜೆಪಿ ದೇಶದೆಲ್ಲೆಡೆ ಯಶಸ್ಸು ಪಡೆಯುತ್ತಿದೆ. ಯಾರು ತಾನೇ ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಇಷ್ಟ ಪಡುತ್ತಾರೆ ಎಂದು ಪ್ರಶ್ನಿಸಿದರು. 

ಅವರು ಬರುತ್ತಾರೆ, ಇವರು ಬರುತ್ತಾರೆ ಎಂದು ಕಾಂಗ್ರೆಸ್ಸಿನವರು ಹೇಳಿಕೊಳ್ಳುತ್ತಾರೆ. ಕಾಂಗ್ರೆಸ್ಸಿನಿಂದ ಬಿಜೆಪಿಗೆ ಶಾಸಕರು ಬರುತ್ತಾರೋ, ನಾಯಕರು ಬರುತ್ತಾರೋ ನೋಡೋಣ ಎಂದರು.

ಇನ್ನೂ ಬಿಜೆಪಿ ವಿರುದ್ದ ಕಾಂಗ್ರೆಸ್‌ ಪಕ್ಷ ಇಲ್ಲಸಲ್ಲದ ಅಪಪ್ರಚಾರ ಮಾಡುತ್ತಿದೆ, ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ದ ಅಪಪ್ರಚಾರ ಮಾಡುತ್ತಲೇ ನಿರ್ನಾಮವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ ಅವರು, ಬಿಜೆಪಿಯ ಯಾವ ಶಾಸಕರೂ ಸತ್ತು ಹೋಗಿರುವ ಕಾಂಗ್ರೆಸ್ ಜೊತೆ ಹೋಗಲು ಸಾಧ್ಯವಿಲ್ಲ. ದೇಶದ ರಕ್ಷಣೆ ಮಾಡುವ ಮತ್ತು ಸಂಘಟನೆ ಇರುವ ಬಿಜೆಪಿ ದೇಶದೆಲ್ಲೆಡೆ ಯಶಸ್ಸು ಪಡೆಯುತ್ತಿದೆ. ಯಾರು ತಾನೇ ರಾತ್ರಿ ಕಂಡ ಬಾವಿಗೆ ಹಗಲು ಬೀಳಲು ಇಷ್ಟ ಪಡುತ್ತಾರೆ? ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com