ಚುನಾವಣಾ ಅಧಿಸೂಚನೆ ಹೊರ ಬಿದ್ದ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್: ಸಿ.ಟಿ. ರವಿ

ಚುನಾವಣಾ ಅಧಿಸೂಚನೆ ಹೊರ ಬಿದ್ದ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.
ಸಿ.ಟಿ ರವಿ
ಸಿ.ಟಿ ರವಿ
Updated on

ಕಲಬುರಗಿ: ಚುನಾವಣಾ ಅಧಿಸೂಚನೆ ಹೊರ ಬಿದ್ದ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಚುನಾವಣಾ ಅಧಿಸೂಚನೆಗೂ ಮುನ್ನ ಬಿಜೆಪಿ ತನ್ನ ಪಟ್ಟಿಯನ್ನು ಪ್ರಕಟಿಸುವುದಿಲ್ಲ ಎಂದು ಸಿ.ಟಿ ರವಿ ಹೇಳಿದ್ದಾರೆ.  ಈಗಾಗಲೇ ಸೂಕ್ತ ಅಭ್ಯರ್ಥಿಗಳ ಆಯ್ಕೆಗೆ ಆಂತರಿಕ ಹಾಗೂ ಬಾಹ್ಯ ಸಮೀಕ್ಷೆ ಆರಂಭವಾಗಿದ್ದು, ಆಂತರಿಕ ಸಮೀಕ್ಷೆಗಾಗಿ ರಾಷ್ಟ್ರೀಯ ನಾಯಕರನ್ನು ಒಳಗೊಂಡ 10 ತಂಡಗಳನ್ನು ರಚಿಸಲಾಗಿದೆ.

ಇದರಲ್ಲಿ ರಾಷ್ಟ್ರೀಯ ನಾಯಕರು ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆಯಲಿದ್ದಾರೆ. ಬಾಹ್ಯ ಸಮೀಕ್ಷೆಗಾಗಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ, ಅಂತಿಮವಾಗಿ ಬಿಜೆಪಿ ಸಂಸದೀಯ ಮಂಡಳಿ ಪಟ್ಟಿ ಪ್ರಕಟಿಸಲಿದೆ.

ಚುನಾವಣೆಗೆ ಸ್ಪರ್ಧಿಸಲು ಯಾವುದೇ ವಯಸ್ಸಿನ ಮಿತಿಯನ್ನು ಪಕ್ಷ ನಿಗದಿಪಡಿಸಿಲ್ಲ, 75 ವರ್ಷ ಮೇಲ್ಪಟ್ಟವರು ಸ್ಪರ್ಧಿಸುವಂತಿಲ್ಲ ಎಂಬ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಅವರು ತಿರುಗೇಟು ನೀಡಿದರು.

ಬಿಜೆಪಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿರುವುದನ್ನು ಸಿ.ಟಿ ರವಿ ಸಮರ್ಥಿಸಿಕೊಂಡಿದ್ದಾರೆ. ನರೇಂದ್ರ ಮೋದಿ ಸೇರಿದಂತೆ ಹಲವು ನಾಯಕರು ರಾಜ್ಯಕ್ಕೆ ಹೆಚ್ಚು ಭೇಟಿ ನೀಡುತ್ತಿರುವುದರಿಂದ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಬರುತ್ತವೆ ಎಂದು ಹೇಳಿದ್ದಾರೆ. ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವದ ಮಾನ ಹರಾಜು ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com