ಡಿ ಕೆ ಶಿವಕುಮಾರ್
ರಾಜಕೀಯ
ಯುಗಾದಿ ಹಬ್ಬದ ರಜೆ ಪ್ರಯುಕ್ತ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮುಂದೂಡಿಕೆ: ಡಿ ಕೆ ಶಿವಕುಮಾರ್
ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬುಧವಾರ ಯುಗಾದಿ ಹಬ್ಬದ ದಿನ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಅದೀಗ ಮುಂದೂಡಿಕೆಯಾಗಿದೆ.
ಬೆಂಗಳೂರು:ವಿಧಾನಸಭೆ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬುಧವಾರ ಯುಗಾದಿ ಹಬ್ಬದ ದಿನ ಬಿಡುಗಡೆಯಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಅದೀಗ ಮುಂದೂಡಿಕೆಯಾಗಿದೆ.
ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವುದು ಸಂಶಯ, ಇಂದು ಯುಗಾದಿ ಹಬ್ಬವಾಗಿರುವುದರಿಂದ ರಜೆಯಿರುವುದರಿಂದ ನಾಳೆ ಪತ್ರಿಕೆಗಳು ಮುದ್ರಣವಾಗದಿರುವುದರಿಂದ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹಬ್ಬದ ಪ್ರಯುಕ್ತ ಬೆಂಗಳೂರಿಗೆ ಇಂದು ಬಿಡುಗಡೆಯಾಗುವುದಿಲ್ಲ. ಇನ್ನು ಎರಡು -ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್.
ಮುಂದಿನ ಎರಡು-ಮೂರು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 124 ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ