ಚಿಂತೆ ಮಾಡಬೇಡ್ರಿ ನಾನು ಮುಂದಿನ ಮುಖ್ಯಮಂತ್ರಿ ಆಗಿ ಬರ್ತೀನಿ: ಬಸವರಾಜ ಬೊಮ್ಮಾಯಿ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ  ಮತ್ತು ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮುಂದಿನ ಸಿಎಂ ನಾನೇ ಎಂದು ಹೇಳಿ ಕಿಚ್ಚು ಹಚ್ಚಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ  ಮತ್ತು ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ಸಿಎಂ ನಾನೇ ಎಂದು ಹೇಳಿ ಕಿಚ್ಚು ಹಚ್ಚಿದ್ದಾರೆ.

ಇತ್ತೀಚೆಗಷ್ಟೇ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಲಿಂಗಾಯತರೇ ಮುಂದಿನ ಸಿಎಂ ಎಂದು ಹೇಳಿದ್ದರು. ಇದೀಗ ಬಸವರಾಜ್ ಬೊಮ್ಮಾಯಿ ನಾನೇ ಮುಂದಿನ ಸಿಎಂ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. 

ಪಿಎಂ ಕಿಸಾನ್ 6ನೇ ಕಂತಿನ 975 ಕೋಟಿ ರೂಪಾಯಿ ಬಿಡುಗಡೆ ಮಾಡಿದರು. 48 ಲಕ್ಷ 75 ಸಾವಿರ ಜನ ಫಲಾನುಭವಿಗಳ ಅಕೌಂಟಿಗೆ ಹಣ ಜಮಾವಣೆಗೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ ನಾನೇ ಸಿಎಂ ಆಗಿ ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಂತೆ ಮಾಡಬೇಡಿ, ನಾನೇ ಸಿಎಂ ಆಗಿ ಬರ್ತಿನಿ: ಬೀಳಗಿ ಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ಸಾವಿರಾರು ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಆದರೆ ಮುರುಗೇಶ್ ‌ನನ್ನನ್ನು ಕರೆದಿಲ್ಲ, ನೆಕ್ಸ್ಟ್​ ನಾನೇ ಬರ್ತೀನಿ. ಚಿಂತೆ ಮಾಡಬೇಡ್ರಿ ನಾನು ಮುಂದಿನ ಮುಖ್ಯಮಂತ್ರಿ ಆಗಿ ಬರ್ತೀನಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com