ದರ್ಶನ್ ಪುಟ್ಟಣ್ಣಯ್ಯ
ದರ್ಶನ್ ಪುಟ್ಟಣ್ಣಯ್ಯ

ವಿಧಾನಸಭೆ ಚುನಾವಣೆ: ಮೇಲುಕೋಟೆಯಲ್ಲಿ ದರ್ಶನ್‌ ಪುಟ್ಟಣ್ಣಯ್ಯಗೆ ಕಾಂಗ್ರೆಸ್ ಬೆಂಬಲ?

ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ದಿವಂಗತ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್  ಅವರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ.

ಮಂಡ್ಯ: ಮಂಡ್ಯ ಜಿಲ್ಲೆಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದಿಂದ ದಿವಂಗತ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಅವರನ್ನು ಕಾಂಗ್ರೆಸ್ ಬೆಂಬಲಿಸುವ ಸಾಧ್ಯತೆ ಇದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಂಡ್ಯದ ಕಾಂಗ್ರೆಸ್ ಮುಖಂಡರಾದ ಪಿ.ಎಂ.ನರೇಂದ್ರಸ್ವಾಮಿ ಮತ್ತು ಎನ್.ಚೆಲುವರಾಯಸ್ವಾಮಿ ಅವರೊಂದಿಗೆ ಸೋಮವಾರ ಪಕ್ಷದ ಕಚೇರಿಯಲ್ಲಿ ದರ್ಶನ್ ಅವರೊಂದಿಗೆ ಸಮಾಲೋಚನೆ ನಡೆಸಿದರು.

ಸಭೆ ಫಲಪ್ರದವಾಗಿದ್ದು, ಮುಖಂಡರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ದರ್ಶನ್  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆತಿಳಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ವಿರುದ್ಧ ಕಾಂಗ್ರೆಸ್ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ದರ್ಶನ್ ಆಗ ಸ್ವರಾಜ್ ಇಂಡಿಯಾ ಟಿಕೆಟ್‌ನಲ್ಲಿ ಸ್ಪರ್ಧಿಸಿ ಜೆಡಿಎಸ್‌ನ ಸಿಎಸ್ ಪುಟ್ಟರಾಜು ವಿರುದ್ಧ 23,000 ಮತಗಳ ಅಲ್ಪ ಅಂತರದಿಂದ ಸೋತಿದ್ದರು.

Related Stories

No stories found.

Advertisement

X
Kannada Prabha
www.kannadaprabha.com