ಯಾವುದೇ ರೀತಿಯ ಆಪರೇಷನ್ ಇಲ್ಲದೆ 130 ಸ್ಥಾನಗಳಲ್ಲಿ ಬಿಜೆಪಿ ಗೆಲುವಿನ ನಿರೀಕ್ಷೆ: ಯತ್ನಾಳ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಇಲ್ಲದೇ  ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕೋಡಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಆಪರೇಷನ್ ಇಲ್ಲದೇ  ಬಿಜೆಪಿ 130 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯತ್ನಾಳ್, ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ಅನುಸರಿಸುತ್ತಿರುವ ಪ್ರಕ್ರಿಯೆ ದೇಶದಲ್ಲೇ ವಿಶಿಷ್ಟವಾಗಿದೆ. ಅಭ್ಯರ್ಥಿಗಳು ಈ ಹಿಂದೆ ಬೆಂಗಳೂರು ಅಥವಾ ನವದೆಹಲಿಗೆ ಧಾವಿಸಿ ಪಕ್ಷದ ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದರು ಆದರೆ ಈಗ ಬಿಜೆಪಿ ವೀಕ್ಷಕರು ಮತ್ತು ಪಕ್ಷದ ಪದಾಧಿಕಾರಿಗಳ ಸಹಾಯದಿಂದ ವಿವಿಧ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದೆ ಎಂದರು.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿಯ ಜಿಲ್ಲಾ ಕೋರ್ ಕಮಿಟಿಗಳು ಸಭೆಗಳನ್ನು ನಡೆಸುತ್ತಿವೆ. ಪ್ರತಿ ಕ್ಷೇತ್ರದಿಂದ ಮೂರು ಅಭ್ಯರ್ಥಿಗಳ ಪಟ್ಟಿಯನ್ನು ಕಳುಹಿಸಲಾಗುವುದು, ನಂತರ ನವದೆಹಲಿಯ ಪಕ್ಷದ ಉನ್ನತ ನಾಯಕತ್ವವು ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತದೆ. ರಾಜ್ಯದಲ್ಲಿ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿಯೊಳಗೆ ಅಭ್ಯರ್ಥಿಗಳಿಗೆ ಯಾವುದೇ ಗೊಂದಲವಿಲ್ಲ, ಆರಂಭದಲ್ಲಿ ಕೆಲವು ಭಿನ್ನಾಭಿಪ್ರಾಯಗಳಿದ್ದರೂ, ಪಕ್ಷವು ಎಲ್ಲವನ್ನೂ ಪರಿಹರಿಸುತ್ತದೆ ಎಂದರು. 

ರಾಜ್ಯದಲ್ಲಿ ಪಕ್ಷವು ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಅನುಸರಿಸುತ್ತಿರುವ ಪ್ರಕ್ರಿಯೆಯನ್ನು ಹೈಲೈಟ್ ಮಾಡಿದ ಯತ್ನಾಳ್, ನಾಯಕರು ಆಕಾಂಕ್ಷಿಗಳ ಬಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದಾರೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ನಾಯಕರ ತಂಡದಿಂದ ಆಂತರಿಕ ಸಮೀಕ್ಷೆಯನ್ನು ಸಹ ಮಾಡಲಾಗಿದೆ ಎಂದು ಅವರು ಹೇಳಿದರು.

ವಿವಿಧ ಏಜೆನ್ಸಿಗಳು ನಡೆಸುತ್ತಿರುವ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಳ್ಳಿಹಾಕಿದ ಅವರು, ಈ ಹಿಂದೆ ಚುನಾವಣೆಗೆ ಹೋದ ಹೆಚ್ಚಿನ ರಾಜ್ಯಗಳಲ್ಲಿ ಸಮೀಕ್ಷೆಗಳು ನಿಜವಾಗಲಿಲ್ಲ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com