ಬಜರಂಗ ದಳದೊಂದಿಗೆ ಹನುಮಂತನ ಹೋಲಿಕೆ, ಮೋದಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಬಜರಂಗ ದಳದೊಂದಿಗೆ ಹನುಮಂತನನ್ನು ಹೋಲಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
ಪ್ರಧಾನಿ ಮೋದಿ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬಜರಂಗ ದಳದೊಂದಿಗೆ ಹನುಮಂತನನ್ನು ಹೋಲಿಸುವ ಮೂಲಕ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

ಹೀಗೆ ಪ್ರಧಾನಿ ಹೋಲಿಕೆ ಮಾಡುವುದು ನಾಚಿಕೆಗೇಡಿನ ಸಂಗತಿಯಾಗಿದ್ದು, ಕೋಟ್ಯಂತರ ಹನುಮಂತನ ಭಕ್ತರಿಗೆ ಅಪಮಾನ ಮಾಡಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಕಿಡಿಕಾರಿದ್ದಾರೆ.

ಪ್ರಧಾನ ಮಂತ್ರಿ ಭಗವಾನ್ ಹನುಮಂತನ ಮೇಲಿನ ನಮ್ಮ ನಂಬಿಕೆಯನ್ನು ಅವಮಾನಿಸುತ್ತಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಅವರು ದೇಶದ ಕ್ಷಮೆಯಾಚಿಸಬೇಕು. ಭಜರಂಗ ಬಲಿಯನ್ನು ಅವಮಾನಿಸುವ ಹಕ್ಕನ್ನು ಯಾರೂ ಪ್ರಧಾನಿಗೆ ನೀಡಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com