ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ 5 ಗ್ಯಾರಂಟಿಗಳು ಸಂಪುಟ ಸಭೆಯಲ್ಲಿಯೇ ಜಾರಿ: ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ

ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸ
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ
ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ
Updated on: 

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 200 ಯೂನಿಟ್​ ಉಚಿತ ವಿದ್ಯುತ್, ಪ್ರತಿ ವ್ಯಕ್ತಿಗೆ 10 ಕೆಜಿ ಉಚಿತ ಅಕ್ಕಿ, ಮನೆ ಯಜಮಾನಿಗೆ 2 ಸಾವಿರ ರೂಪಾಯಿ, ನಿರುದ್ಯೋಗ ಯುವಕರಿಗೆ ನೆರವು, ಪದವೀಧರರಿಗೆ 3 ಸಾವಿರ ರೂಪಾಯಿ, ಡಿಪ್ಲೊಮೊ ಪದವೀಧರರಿಗೆ 1,500 ರೂಪಾಯಿ ಆರ್ಥಿಕ ನೆರವು  ಈ 5 ಗ್ಯಾರಂಟಿಗಳನ್ನು ಗ್ಯಾರಂಟಿ ನಾವು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನೀಡಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು(Congress manifesto) ಬಿಡುಗಡೆ ಮಾಡಿ ಮಾತನಾಡಿದ ಅವರು, ಈ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮೊದಲ ದಿನವೇ ಮಂಜೂರು ಮಾಡಿ ಜನರ ಕೈಗೆ ತಲುಪಿಸುತ್ತೇವೆ ಎಂದರು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಕೊಟ್ಟಿರುವ 5 ಪ್ರಮುಖ ಭರವಸೆಗಳನ್ನು ಈಡೇರಿಸಿದರೆ ರಾಜ್ಯ ದಿವಾಳಿಯಾಗುತ್ತದೆ, ಇವರಿಗೆ ಗ್ಯಾರಂಟಿ ಈ ಭರವಸೆಗಳನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿಯವರು ಹೇಳುತ್ತಾರೆ. ಅವರಿಂದ ನಾನು ಈ ಮಾತು ನಿರೀಕ್ಷೆ ಮಾಡಿರಲಿಲ್ಲ, ಹಾಗಾದರೆ ಬಿಜೆಪಿ ಕೊಟ್ಟಿರುವ ಭರವಸೆಗಳಿಂದ ರಾಜ್ಯ ಏನಾಗುತ್ತದೆ ಎಂದು ಪ್ರಶ್ನಿಸಿದರು.

ಇವತ್ತು 56 ಸಾವಿರ ಕೋಟಿ ರೂಪಾಯಿ ರಾಜ್ಯದಲ್ಲಿ ಅಸಲು ಮತ್ತು ಬಡ್ಡಿ ಕಟ್ಟಬೇಕಾಗಿದೆ, ಎಲ್ಲಿಂದ ಕಟ್ಟುತ್ತಾರೆ. ನಾನು ಮುಖ್ಯಮಂತ್ರಿಯಾಗುವವರೆಗೆ ಸ್ವಾತಂತ್ರ್ಯ ಬಂದಲ್ಲಿಂದ ರಾಜ್ಯದ ಮೇಲಿದ್ದ ಸಾಲ 2 ಲಕ್ಷದ 42 ಸಾವಿರ ಕೋಟಿ ಈ 5 ವರ್ಷದಲ್ಲಿ 5 ಲಕ್ಷದ 64 ಸಾವಿರ ಕೋಟಿಯಾಗಿದೆ. ಕೇವಲ 5 ವರ್ಷದಲ್ಲಿ 3 ಲಕ್ಷದ 22 ಸಾವಿರ ಕೋಟಿ ರೂಪಾಯಿ ಸಾಲ ಮಾಡಿದ್ದಾರೆ ಬಿಜೆಪಿಯವರು, ಹೀಗಾದರೆ ರಾಜ್ಯ ಉಳಿಯುತ್ತದೆಯೇ ಎಂದು ಪ್ರಶ್ನಿಸಿದರು.

56 ಸಾವಿರ ಕೋಟಿ ಸಾಲ ಮಾಡಿದ್ದು ಆಸ್ತಿ ಸಂಪಾದನೆಗೆಯೇ, ಪ್ರಧಾನಿ ಮೋದಿಯವರಿಗೆ ಕರ್ನಾಟಕದ ಹಣಕಾಸಿನ ಬಗ್ಗೆ ಅರಿವಿದೆಯೇ, ನಾನು 13 ಬಜೆಟ್ ಮಂಡಿಸಿದ್ದೇನೆ, ಕರ್ನಾಟಕದ ಬಜೆಟ್ ಆರ್ಥಿಕ ಸ್ಥಿತಿಗತಿ ಬಗ್ಗೆ ನನಗೆ ಅರಿವಿದೆ. ಕಾಂಗ್ರೆಸ್ ಕೊಟ್ಟಿರುವ 5 ಗ್ಯಾರಂಟಿಗಳನ್ನು ಮತ್ತು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಚಾಚೂ ತಪ್ಪದೆ ಜಾರಿಗೆ ತರುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com