ಪ್ರಧಾನಿ ಮೋದಿ 'ನಾಲಾಯಕ್' ಎಂದ ಪ್ರಿಯಾಂಕ್ ಖರ್ಗೆಗೆ ಚುನಾವಣಾ ಆಯೋಗದ ನೋಟಿಸ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನಾಲಾಯಕ್’ ಎಂಬ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ನಾಲಾಯಕ್’ ಎಂಬ ಹೇಳಿಕೆ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿ ಮಾಡಿದೆ.

ಪ್ರಿಯಾಂಕ್ ಖರ್ಗೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವುದಾಗಿ ನೋಟಿಸ್ ನೀಡಲಾಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸೂಕ್ತ ಕ್ರಮ ಏಕೆ ತೆಗೆದುಕೊಳ್ಳಬಾರದು ಎಂಬ ನೋಟಿಸ್‌ಗೆ ಮೇ 4 ರ ಸಂಜೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಆಯೋಗ ಪ್ರಿಯಾಂಕ್ ಖರ್ಗೆ ಅವರನ್ನು ಕೇಳಿದೆ.

ಪ್ರಧಾನಿ ಮೋದಿ ವಿರುದ್ಧ ನಿಂದನಾತ್ಮಕ ಮಾತು ಬಳಸಿರುವ ಪ್ರಿಯಾಂಕ್ ಖರ್ಗೆ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com