ಬಜರಂಗ ದಳ ಬ್ಯಾನ್: ಕಾಂಗ್ರೆಸ್ ಪ್ರಣಾಳಿಕೆ ಕೇಂದ್ರೀಕರಿಸಿ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಪ್ರಚಾರ

ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಂತಹ ನಾಯಕರ ನಿರ್ಗಮನದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಟ್ಟಿನ ಒತ್ತಡಕ್ಕೆ ಸಿಲುಕಿರುವ ಬಿಜೆಪಿ, ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆಯನ್ನೇ ಪ್ರಮುಖ ವಿಷಯನ್ನಾಗಿಸಿಕೊಂಡು ಪ್ರಚಾರ ನಡೆಸುತ್ತಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಜಗದೀಶ ಶೆಟ್ಟರ್, ಲಕ್ಷ್ಮಣ ಸವದಿ ಅವರಂತಹ ನಾಯಕರ ನಿರ್ಗಮನದಿಂದ ಉತ್ತರ ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಟ್ಟಿನ ಒತ್ತಡಕ್ಕೆ ಸಿಲುಕಿರುವ ಬಿಜೆಪಿ, ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಣಾಳಿಕೆಯನ್ನೇ ಪ್ರಮುಖ ವಿಷಯನ್ನಾಗಿಸಿಕೊಂಡು ಪ್ರಚಾರ ನಡೆಸುತ್ತಿದೆ.

ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ಪ್ರಸ್ತಾಪ ಅದನ್ನು ಉಗ್ರ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನೊಂದಿಗೆ ಹೋಲಿಸುವ ಸ್ಪಷ್ಟ ಸಂಕೇತವಾಗಿದೆ ಎಂದು ಸಂಘ ಪರಿವಾರದ ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ.

ಸಂಘ ಪರಿವಾರ ಕಾಂಗ್ರೆಸ್ ಹಿಂದೂಗಳ ವಿರೋಧಿ ಎಂಬ ಹಣೆ ಪಟ್ಟಿ ಕಟ್ಟಲು ಯತ್ನಿಸುತ್ತಿದೆ ಮತ್ತು ಕರ್ನಾಟಕದಲ್ಲಿ  ಗೆದ್ದರೆ ಅದು ಮುಂದುವರಿಯುತ್ತದೆ. ಹಾಗಾಗಿ ಕಾಂಗ್ರೆಸ್ ಸೋಲಿಸಲು ಹಿಂದೂಗಳು ಬಿಜೆಪಿಗೆ ಮತ ಹಾಕುವಂತೆ ಹೇಳಲಾಗುತ್ತಿದೆ ಎಂದು ರಾಜಕೀಯ ವೀಕ್ಷಕರ ಹೇಳುತ್ತಿದ್ದಾರೆ. 

ಬಜರಂಗ ದಳ ಭಗವಾನ್ ಹನುಮಂತನೊಂದಿಗೆ ಸಂಬಂಧ ಹೊಂದಿಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳುವ ಮೂಲಕ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನಿಸುತ್ತಿದೆ. ಯಾವುದೇ ಸಂಘಟನೆ ನಿಷೇಧಿಸುವ ಯೋಜನೆ ಇಲ್ಲ ಮತ್ತು ದ್ವೇಷದ ಭಾಷಣ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾಪ ಮಾಡಲಾಗಿದೆ ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಬಜರಂಗ ದಳ ಸಂಘ ಪರಿವಾರದ ಸಂಘಟನೆಯಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ಪಕ್ಷ ಎಂಬುದು ಆ ಪಕ್ಷದ ನಾಯಕರಿಗೆ ಗೊತ್ತಿಲ್ಲವೇ ಎಂದು  ಆರ್ ಎಸ್ ಎಸ್ ಸಂಘಟನೆ ಹಿರಿಯ ಮುಖಂಡರೊಬ್ಬರು ಪ್ರಶ್ನಿಸಿದ್ದು, ನಮ್ಮನ್ನು ಪಿಎಫ್ ಐ ಜೊತೆಗೆ ಹೋಲಿಕೆ ಸರಿಯಲ್ಲ. ಶತಾಯ ಗತಯ ಚುನಾವಣೆಯಲ್ಲಿ ಗೆಲಲ್ಲು ಪ್ರಯತ್ನಿಸುತ್ತಿದೆ ಆದರೆ, ಇಂತಹ ನಡೆ ರಾಜ್ಯದಲ್ಲಿ ಕೋಮು ಸೌಹಾರ್ದತೆ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. 

ಮೂಲಗಳ ಪ್ರಕಾರ ಬಿಜೆಪಿ ಮತ್ತು ಸಂಘ ಪರಿವಾರ ಬಜರಂಗದಳ ನಿಷೇಧಿಸುವ ಕಾಂಗ್ರೆಸ್ ನಡೆಗೆ ತಳಮಟ್ಟದಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದೆ. ಚುನಾವಣೆ ಹೊಸ್ತಿಲಲ್ಲಿ ಕೋಮು ವಿಚಾರಗಳನ್ನು ಕೆದಕಲು ಸಂಘಪರಿವಾರ ಯತ್ನಿಸುತ್ತಿದೆ. ಉತ್ತರ ಕರ್ನಾಟಕದ ಹಲವು ಭದ್ರಕೋಟೆಗಳಲ್ಲಿ ಹಿರಿಯ ನಾಯಕರ ನಿರ್ಗಮನ, ನಲವತ್ತು ಪರ್ಸೆಂಟ್ ಕಮಿಷನ್ ಆರೋಪಗಳಿಂದ ಬಿಜೆಪಿಗೆ ಹಿನ್ನಡೆಯಾಗಿದೆ.

ಬಿಜೆಪಿ ನಾಯಕರಿಗೆ ಧಾರವಾಡ ಜಿಲ್ಲೆಯ ಭದ್ರಕೋಟೆಗಳಲ್ಲೂ ನಿರೀಕ್ಷಿತ ಜನಸ್ಪಂದನೆ ಸಿಗುತ್ತಿಲ್ಲ. ಈ ಕ್ಷೇತ್ರದಲ್ಲಿ ಸ್ಥಾನ ಕಳೆದುಕೊಂಡರೆ ಮುಂದಿನ ರಾಜಕೀಯ ಭವಿಷ್ಯಕ್ಕೆ ದೊಡ್ಡ ಮಟ್ಟದಲ್ಲಿ ಪರಿಣಾಮ ಬೀರಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸೇರಿದಂತೆ ಹಿರಿಯ ನಾಯಕರು ಧಾರವಾಡದಲ್ಲಿ ಬೀಡುಬಿಟ್ಟಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com