ಪ್ರಧಾನಿ ಮೋದಿ, ಕೆಎಸ್ ಈಶ್ವರಪ್ಪ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಪ್ರಧಾನಿ ಮೋದಿ, ಕೆ.ಎಸ್. ಈಶ್ವರಪ್ಪ
ಪ್ರಧಾನಿ ಮೋದಿ, ಕೆ.ಎಸ್. ಈಶ್ವರಪ್ಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ ಕೇಳಲು ಹಿಂದೂ ದೇವರುಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೇ. ರೋಡ್ ಶೋ ಮೂಲಕ ಜನರಿಗೆ ಅನಾನುಕೂಲತೆ ಉಂಟು ಮಾಡುತ್ತಿದ್ದಾರೆ. ಈ ಸಂಬಂಧ ಸುಪ್ರೀಂ ಕೋರ್ಟ್ ಈಗಾಗಲೇ ಮಾರ್ಗಸೂತ್ರ ಹೊರಡಿಸಿರುವುದಾಗಿ ಕಾಂಗ್ರೆಸ್ ಕಾನೂನು ಘಟಕದ ಎಸ್ ಎ ಅಹ್ಮದ್ ಹೇಳಿದರು.

ಇನ್ನೊಂದೆಡೆ  ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com