ಹಿಂದೂಗಳು ಬಿಜೆಪಿಯ ಆಸ್ತಿಯಲ್ಲ: ಲಕ್ಷ್ಮಣ್ ಸವದಿ

ಹಿಂದೂಗಳು ಬಿಜೆಪಿಯ ಆಸ್ತಿಯಲ್ಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರಿಗೆ ಲಕ್ಷ್ಮಣ್ ಸವದಿಯವರು ತಿರುಗೇಟು ನೀಡಿದ್ದಾರೆ.
ಲಕ್ಷ್ಮಣ್ ಸವದಿ
ಲಕ್ಷ್ಮಣ್ ಸವದಿ

ವಿಜಯಪುರ: ಹಿಂದೂಗಳು ಬಿಜೆಪಿಯ ಆಸ್ತಿಯಲ್ಲಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಅವರಿಗೆ ಲಕ್ಷ್ಮಣ್ ಸವದಿಯವರು ತಿರುಗೇಟು ನೀಡಿದ್ದಾರೆ.

ಸ್ವಾಭಿಮಾನ ಇರುವ ಹಿಂದೂಗಳು ಕಾಂಗ್ರೆಸ್‌ಗೆ ಮತ ಹಾಕಬೇಡಿ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಲಕ್ಷ್ಮಣ್ ಸವದಿಯವರು, ಹಿಂದೂಗಳು ಬಿಜೆಪಿ ಆಸ್ತಿಯಲ್ಲ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳು ತಮ್ಮ ಆಯ್ಕೆಯ ಯಾವುದೇ ಪಕ್ಷಕ್ಕೆ ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಆದ್ದರಿಂದ ಅವರು ಬಿಜೆಪಿ ಮಾತ್ರವಲ್ಲದೆ ಎಲ್ಲಾ ಪಕ್ಷಗಳಿಗೂ ಬೆಂಬಲ ಸೂಚಿಸುತ್ತಾರೆಂದು ಹೇಳಿದರು.

ಯತ್ನಾಳ್ ಅವರ ಹೇಳಿಕೆಯ ಬಗ್ಗೆ ಹೆಚ್ಚು ಪ್ರತಿಕ್ರಿಯಿಸಲು ಬಯಸುವುದಿಲ್ಲ. ಏಕೆಂದರೆ ಯತ್ನಾಳ್ ಅವರು ದೊಡ್ಡ ನಾಯಕರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಳೆದ ಮೂರು ವರ್ಷಗಳ ಬಿಜೆಪಿ ಆಡಳಿತದಲ್ಲಿ ರಾಜ್ಯದಲ್ಲಿ ರೈತರಿಗಾಗಿ ಯಾವುದೇ ನಿರ್ದಿಷ್ಟ ಯೋಜನೆಗಳನ್ನು ಸರ್ಕಾರ ಜಾರಿಗೆ ತಂದಿಲ್ಲ. ಸರ್ಕಾರ ಕೃಷಿ ಭಾಗ್ಯ, ಟ್ರ್ಯಾಕ್ಟರ್ ಖರೀದಿಗೆ ಸಹಾಯಧನ, ಕೃಷಿ ಹೊಂಡದಂತಹ ಕಾರ್ಯಕ್ರಮಗಳನ್ನು ಕೂಡ ಸ್ಥಗಿತಗೊಳಿಸಿದ. ಈ ಎಲ್ಲಾ ಯೋಜನೆಗಳನ್ನು ಕಾಂಗ್ರೆಸ್ ತನ್ನ ಅಧಿಕಾರಾವಧಿಯಲ್ಲಿ ಪ್ರಾರಂಭಿಸಿತು, ಆದರೆ, ಬಿಜೆಪಿ ಸರ್ಕಾರವು ಈ ರೈತ ಪರ ಯೋಜನೆಗಳನ್ನು ಸ್ಥಗಿತಗೊಳಿಸಿತು. ಇದರಿಂದಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ಧ ರೈತರಲ್ಲಿ ಅಸಮಾಧಾನ ಹೆಚ್ಚುತ್ತಿದೆ ಎಂದು ತಿಳಿಸಿದರು.

ಬಿಜೆಪಿಯು ಆಡಳಿತ ವಿರೋಧಿ ಮತ್ತು ಆಂತರಿಕ ಕಚ್ಚಾಟದಿಂದ ಬಳಲುತ್ತಿದ್ದು, ಇದು ಮುಂಬರುವ ಚುನಾವಣೆಯಲ್ಲಿ ಪಕ್ಷದ ದಯನೀಯ ಸೋಲಿಗೆ ಕಾರಣವಾಗುತ್ತದೆ ಎಂದರು.

ಸಾರ್ವಜನಿಕರ ಭಾವನೆಗಳು ಕಾಂಗ್ರೆಸ್‌ನತ್ತ ವಾಲಿರುವುದರಿಂದ ಈ ಬಾರಿಯ ಚುನಾವಣೆಯಲ್ಲಿ ಪಕ್ಷವು 130 ಸ್ಥಾನಗಳ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com