ಹೊನ್ನಾವರ: ಡಿಕೆ ಶಿವಕುಮಾರ್ ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ, ತಪ್ಪಿದ ದುರಂತ; ಹಿಂದುತ್ವ ನಮ್ಮ ಆಸ್ತಿಯೂ ಹೌದು ಎಂದ ಕೆಪಿಸಿಸಿ ಅಧ್ಯಕ್ಷ

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದು ಅದರ ಕಿಟಕಿಯ ಗ್ಲಾಸುಗಳು ಚೂರಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮೊನ್ನೆ ಮಂಗಳವಾರವಷ್ಟೇ ನಡೆದಿತ್ತು. ಇಂದು ಗುರುವಾರ ಮತ್ತೊಂದು ಅವಘಡ ಸಂಭವಿಸಿದೆ.
ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದು ಗ್ಲಾಸ್ ಚೂರಾಗಿದ್ದ ಸಂದರ್ಭ
ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದು ಗ್ಲಾಸ್ ಚೂರಾಗಿದ್ದ ಸಂದರ್ಭ

ಹೊನ್ನಾವರ(ಉತ್ತರ ಕನ್ನಡ): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದು ಅದರ ಕಿಟಕಿಯ ಗ್ಲಾಸುಗಳು ಚೂರಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮೊನ್ನೆ ಮಂಗಳವಾರವಷ್ಟೇ ನಡೆದಿತ್ತು. ಇಂದು ಗುರುವಾರ ಮತ್ತೊಂದು ಅವಘಡ ಸಂಭವಿಸಿದೆ.

ಡಿ ಕೆ ಶಿವಕುಮಾರ್ ಬಂದಿಳಿದ ಹೆಲಿಪ್ಯಾಡ್​​​ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್​ನಲ್ಲಿ ಹುಲ್ಲಿನ ಮೇಲೆ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್​​ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್​ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್​ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್​ಗೆ ಸಿಗ್ನಲ್​​ ಕೊಡುವ ಸ್ಮೋಕ್​ ಕ್ಯಾಂಡಲ್​ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.

ಮೊನ್ನೆ ಮಂಗಳವಾರ ಡಿಕೆ ಶಿವಕುಮಾರ್ ಅವರು ಜಕ್ಕೂರು ವಿಮಾನ ನಿಲ್ದಾಣದಿಂದ ಮುಳಬಾಗಿಲಿಗೆ ತೆರಳುತ್ತಿದ್ದಾಗ ಹೆಲಿಕಾಪ್ಟರ್​ಗೆ ಹದ್ದು ಡಿಕ್ಕಿ ಹೊಡೆದಿತ್ತು. ಪರಿಣಾಮವಾಗಿ ಹೆಲಿಕಾಪ್ಟರ್​ ಮುಂಭಾಗದ ಗಾಜು ಪುಡಿಪುಡಿಯಾಗಿತ್ತು. ಅದೃಷ್ಟವಶಾತ್​ ಹೆಲಿಕಾಪ್ಟರ್​ನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ.

ಈ ಘಟನೆಯ ನಂತರ ಡಿಕೆ ಶಿವಕುಮಾರ್ ಅವರು ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದರು. ಜತೆಗೆ ಜ್ಯೋತಿಷಿ ರಾಜಗುರು ದ್ವಾರಕನಾಥ್ ಅವರಿಂದ ಸಲಹೆಗಳನ್ನೂ ಪಡೆದಿದ್ದರು. 

ಚಾಮುಂಡೇಶ್ವರಿ ದೇವಿ ಮುಂದೆ ರುದ್ರಾಕ್ಷಿ ಜಪ ಮಾಡಿದ ಡಿಕೆಶಿ: ಇಂದು ಹೊನ್ನಾವರಕ್ಕೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿ ಸನ್ನಿಧಿಯಲ್ಲಿ 10 ನಿಮಿಷಗಳಿಗೂ ಹೆಚ್ಚು ಕಾಲ ರುದ್ರಾಕ್ಷಿ ಜಪ ಮಾಡಿದ್ದರು. ಬಳಿಕ ಗೋಪುರದ ಮುಂದೆ ಈಡುಗಾಯಿ ಸೇವೆ ನೆರವೇರಿಸಿದ್ದರು. ನಂತರ ಹೊನ್ನಾವರಕ್ಕೆ ಪ್ರಯಾಣಿಸಿದ್ದರು.

ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ; ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೊನ್ನಾವರದಲ್ಲಿ ಡಿಕೆ ಶಿವಕುಮಾರ್ ಹೇಳಿದರು. ಮಾಧ್ಯಮದವರು ಹಾಗೂ ಬಿಜೆಪಿಯವರು ನಮ್ಮ ಪ್ರಣಾಳಿಕೆ ಸರಿಯಾಗಿ ನೋಡಿಲ್ಲ. ದೇಶದ್ರೋಹ ಮಾಡುವ ಸಂಘಟನೆಯನ್ನು ಮಾತ್ರ ನಿಷೇಧಿಸುವ ಬಗ್ಗೆ ಹೇಳಿದ್ದೇವೆ. ನಾನು ಶಿವ, ಶಿವನ ಕುಮಾರ. ಬಿಜೆಪಿಗರು ಭಾವನೆಗಳ ಆಧಾರದಲ್ಲಿ ಚುನಾವಣೆಗೆ ಹೋದರೆ ಕಾಂಗ್ರೆಸ್ ಬದುಕಿನ ವಿಚಾರದಲ್ಲಿ ಎದುರಿಸುತ್ತಿದೆ. ಹನುಮಾನ್ ಯಾರ ಆಸ್ತಿಯೂ ಅಲ್ಲ, ಹಿಂದುತ್ವ ನಮ್ಮ ಆಸ್ತಿಯೂ ಹೌದು. ನಾನೂ ಕೂಡ ಹಿಂದು, ಸಿದ್ದರಾಮಯ್ಯ ಸಹ ಹಿಂದೂ ಎಲ್ಲಾ ಹಿಂದು ಧರ್ಮದ ಆಚರಣೆ ಮಾಡುತ್ತೇವೆ. ಬಂಗಾರಪ್ಪ ಸಿಎಂ ಆದಾಗ ಆರಾಧನ ಸ್ಕೀಮ್ ತಂದು ಹಳ್ಳಿಯಲ್ಲಿರುವ ದೇವಸ್ಥಾನ ಬೆಳೆಸಿದ್ದರು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com