ಕರ್ನಾಟಕದ ಸಾರ್ವಭೌಮತ್ವದ ಬಗ್ಗೆ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಬಿಜೆಪಿ ದೂರು
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ 2023ಕ್ಕೆ ಇನ್ನೆರಡೇ ದಿನಗಳು ಬಾಕಿ. ಇಂದು ರಾಜಕೀಯ ನಾಯಕರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ರಾಜಕೀಯ ನಾಯಕರ ಪರಸ್ಪರ ಆರೋಪ-ಪ್ರತ್ಯಾರೋಪಗಳಿಗೂ ಇಂದು ಫುಲ್ ಸ್ಟಾಪ್ ಬೀಳಲಿದೆ.
ಈ ಹೊತ್ತಿನಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿಜೆಪಿ ಪರವಾಗಿ ದೂರು ನೀಡಿದ್ದಾರೆ. ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿ ಮಾತನಾಡಿದ್ದಾರೆ ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವೆ ದೂರಿನಲ್ಲಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ . ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿಯವರು ಮಾತನಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ