ಸೌತ್ ಫಸ್ಟ್ ಚುನಾವಣಾ ಪೂರ್ವ ಸಮೀಕ್ಷೆ: ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಹುದ್ದೆಗೆ ಸಿದ್ದು ಬೆಸ್ಟ್

ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಸಮೀಕ್ಷೆಯು ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 105 ರಿಂದ 117 ಸ್ಥಾನಗಳನ್ನು ಗೆಲ್ಲಬಹುದು ಎಂದು ಯೋಜಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಜನರು ಒಲವು ತೋರಿಸಿದ್ದು, ಸುಲಭವಾಗಿ ಮ್ಯಾಜಿಕ್ ನಂಬರ್ ಅನ್ನು ದಾಟಬಹುದು ಎಂದು ತಿಳಿಸಿದೆ.
ಬಿಜೆಪಿ-ಸಿದ್ದರಾಮಯ್ಯ-ಜೆಡಿಎಸ್
ಬಿಜೆಪಿ-ಸಿದ್ದರಾಮಯ್ಯ-ಜೆಡಿಎಸ್
Updated on

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನಕ್ಕೆ ಮುಂಚಿತವಾಗಿ, ರಾಜ್ಯದಲ್ಲಿ ತಮ್ಮ ಗೆಲುವನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಈಗಾಗಲೇ ಹಲವಾರು ಚುನಾವಣಾ ಪೂರ್ವ ಸಮೀಕ್ಷೆಗಳು ಬಿಡುಗಡೆಯಾಗಿದ್ದು, ಬಹುತೇಕ ಕಾಂಗ್ರೆಸ್‌ ಪಕ್ಷ ಮೇಲುಗೈ ಸಾಧಿಸಲಿದೆ ಎಂದೇ ಹೇಳಿವೆ.

ರಾಜ್ಯ ಬಿಜೆಪಿಯು ಈ ಬಾರಿಯೂ ಅಧಿಕಾರದ ಗದ್ದುಗೆ ಏರಲು ಸರ್ವ ಪ್ರಯತ್ನಗಳನ್ನೂ ಮಾಡುತ್ತಿದ್ದು, ಮೋದಿಯವರಿಂದ ಪಕ್ಷದ ಚುನಾವಣಾ ಭವಿಷ್ಯ ಸುಧಾರಿಸಲಿದೆ ಎಂದೇ ಭಾವಿಸಿತ್ತು. ಆದರೆ, ಬೆಂಗಳೂರು ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅಬ್ಬರದ ರೋಡ್ ಶೋ, ರಾಷ್ಟ್ರೀಯ ನಾಯಕರ ಪ್ರಚಾರದ ನಡುವೆಯೂ South First ಸಮೀಕ್ಷೆಯಲ್ಲಿ ಬಿಜೆಪಿಗೆ ಹಿನ್ನಡೆ ಉಂಟಾಗಲಿದೆ ಎಂದಿದೆ. 

ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಕಾಂಗ್ರೆಸ್‌ ಬಹುಮತದೊಂದಿಗೆ ಮೊದಲ ಸ್ಥಾನನದಲ್ಲಿದ್ದು, ಬಿಜೆಪಿ ಎರಡನೇ ಸ್ಥಾನ ಪಡೆದುಕೊಳ್ಳಲಿದೆ. ಮೂರನೇ ಸ್ಥಾನದಲ್ಲಿ ಜೆಡಿಎಸ್‌ ಇರಲಿದೆ. ಇತರರು ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಸಮೀಕ್ಷೆ ತಿಳಿಸಿದೆ.

ಕರ್ನಾಟಕದ ಒಟ್ಟು 224 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 105 ರಿಂದ 117 ಸ್ಥಾನಗಳನ್ನು ಗೆಲ್ಲಬಹುದು ಎಂದು ಯೋಜಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಜನರು ಒಲವು ತೋರಿಸಿದ್ದು, ಸುಲಭವಾಗಿ ಮ್ಯಾಜಿಕ್ ನಂಬರ್ ಅನ್ನು ದಾಟಬಹುದು ಎಂದು ತಿಳಿಸಿದೆ. ಇದಲ್ಲದೆ, ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದ ಶೇ 42ರಷ್ಟು ಜನರು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಸ್ಥಾನದಲ್ಲಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಈಗ ಅಧಿಕಾರದಲ್ಲಿರುವ ಬಿಜೆಪಿ 81 ರಿಂದ 93 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ. ಆದರೆ, ಜೆಡಿಎಸ್ 24 ರಿಂದ 29 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಸ್ವತಂತ್ರ ಮತ್ತು ಪಕ್ಷದ ಅಭ್ಯರ್ಥಿಗಳು ಒಂದರಿಂದ ಮೂರು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ.

ಯಾವ ಪಕ್ಷಕ್ಕೆ ಎಷ್ಟು ಮತ ಹಂಚಿಕೆ?

ಮೇ 1 ರಿಂದ 5ರ ನಡುವೆ ನಡೆಸಲಾದ ಸೌತ್ ಫಸ್ಟ್-ಪೀಪಲ್ಸ್ ಪಲ್ಸ್ ಅಂತಿಮ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ, ಕಾಂಗ್ರೆಸ್ ಶೇ 41.1 ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ ಎಂದು ತೋರಿಸಿದೆ. ಬಿಜೆಪಿ ಶೇ 36 ರಷ್ಟು ಗಳಿಸಲಿದೆ ಎಂದಿದೆ. 2018ರ ವಿಧಾನಸಭೆ ಚುನಾವಣೆಗೆ ಹೋಲಿಸಿದರೆ ಈ ಬಾರಿ ಬಿಜೆಪಿಯು ಕಡಿಮೆ ಮತಗಳನ್ನು ಗಳಿಸಲಿದೆ ಎಂದಿದೆ. 

ಮೂರು ಸಮೀಕ್ಷೆಗಳನ್ನು ನಡೆಸಿದ ಸೌತ್ ಫಸ್ಟ್

ಜನವರಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ 101, ಬಿಜೆಪಿ 91 ಸೀಟು ಗೆಲ್ಲಲಿದೆ ಎಂಬ ವರದಿ ಬಂದಿತ್ತು. ಬಳಿಕ ಏಪ್ರಿಲ್‌ನಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕಾಂಗ್ರೆಸ್ 95 ರಿಂದ 105 ಸೀಟು ಪಡೆದು ಬಹುದೊಡ್ಡ ಪಕ್ಷವಾಗಲಿದೆ ಎಂಬ ವರದಿ ಲಭಿಸಿತ್ತು. ಈವೇಳೆ, ಜೆಡಿಎಸ್ 29 ಸೀಟುಗಳಲ್ಲಿ ಗೆಲುವು ಸಾಧಿಸಬಹುದು ಎಂದು ಅಂದಾಜಿಸಲಾಗಿತ್ತು.

ಬಳಿಕ ನಡೆಸಿದ ಅಂತಿಮ ಸಮೀಕ್ಷೆಯ ವರದಿಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com