ಮತದಾನಕ್ಕೆ ಮುನ್ನ ಟೆಂಪಲ್ ರನ್: ಚಾಮುಂಡಿ ಬೆಟ್ಟಕ್ಕೆ ತೆರಳಿ ಕಾಂಗ್ರೆಸ್ ಗ್ಯಾರಂಟಿ ಪ್ರತಿ ಇಟ್ಟು ಡಿಕೆಶಿ- ಸಿದ್ದರಾಮಯ್ಯ ಪ್ರಾರ್ಥನೆ

ಕರ್ನಾಟಕ ವಿಧಾನಸಭೆ ಚುನಾವಣೆ ಮುನ್ನಾದಿನವಾದ ಇಂದು ಮಂಗಳವಾರ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ.
ಕಾಂಗ್ರೆಸ್ ಗ್ಯಾರಂಟಿ ಪ್ರತಿಯನ್ನಿಟ್ಟು ವಿಶೇಷ ಪೂಜೆ
ಕಾಂಗ್ರೆಸ್ ಗ್ಯಾರಂಟಿ ಪ್ರತಿಯನ್ನಿಟ್ಟು ವಿಶೇಷ ಪೂಜೆ

ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುನ್ನಾದಿನವಾದ ಇಂದು ಮಂಗಳವಾರ ರಾಜಕೀಯ ನಾಯಕರ ಟೆಂಪಲ್ ರನ್ ಜೋರಾಗಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಭಜರಂಗದಳ ಬ್ಯಾನ್ ಮಾಡುವುದಾಗಿ ನೀಡಿದ್ದ ಭರವಸೆ ಭಾರೀ ಸದ್ದು ಮಾಡಿತ್ತು. ಆಡಳಿತ ಪಕ್ಷ ಬಿಜೆಪಿ ಇದನ್ನು ಚುನಾವಣಾ ಅಸ್ತ್ರವಾಗಿ ಬಳಸಿಕೊಂಡು ಜೈ ಭಜರಂಗ ಬಲಿ ಎಂಬ ಅಭಿಯಾನವನ್ನೇ ನಡೆಸಿತು.

ಇದರ ಬೆನ್ನಲ್ಲೇ ಇಂದು ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಹುಬ್ಬಳ್ಳಿಯ ಆಂಜನೇಯ ದೇವಸ್ಥಾನಕ್ಕೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹನುಮಾನ ಚಾಲೀಸ ಪಠಿಸಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಮಧ್ಯಾಹ್ನ ಮೈಸೂರಿನ ಚಾಮುಂಡೇಶ್ವರಿ ದೇಗುಲಕ್ಕೆ ಒಟ್ಟಾಗಿ ತೆರಳಿದ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಚಾಮುಂಡೇಶ್ವರಿಯಲ್ಲಿ ಚುನಾವಣೆಗೆ ಮುನ್ನ ವಿಶೇಷ ಪ್ರಾರ್ಥನೆ ಮಾಡಿದರು. ಕಾಂಗ್ರೆಸ್ ಗ್ಯಾರಂಟಿಯ ಪ್ರತಿಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದ್ದು ಕಂಡುಬಂತು. 

ಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸಹ ಚುನಾವಣೆ ಮುನ್ನಾದಿನ ದೇವರ ಮೊರೆ ಹೋದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com