ಕೊಪ್ಪಳ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ತಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಬೆಂಬಲ ನೀಡುತ್ತದೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮತದಾನ ಮಾಡಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದರೆ ತಮ್ಮ ಪಕ್ಷ ಬೆಂಬಲ ನೀಡುತ್ತದೆ ಎಂದರು.
ರಾಜ್ಯದ 49 ಕ್ಷೇತ್ರಗಳಲ್ಲಿ ಇತ್ತೀಚೆಗೆ ಸ್ಥಾಪನೆ ಮಾಡಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. ಅವರು ನಿನ್ನೆ ತಮ್ಮ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಗಂಗಾವತಿ ತಾಲ್ಲೂಕಿನ ಅಂಜನಾದ್ರಿಯಲ್ಲಿರುವ ಆಂಜನೇಯ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು.
Advertisement