ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ: ಹೆಚ್'ಡಿ.ಕುಮಾರಸ್ವಾಮಿ ವಿಶ್ವಾಸ

ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಬುಧವಾರ ಹೇಳಿದ್ದಾರೆ.
ಕುಟುಂಬ ಸಮೇತ ಮತದಾನ ಮಾಡಿದ ಜೆಡಿಎಸ್ ನಾಯಕ ಹೆಚ್'ಡಿ. ಕುಮಾರಸ್ವಾಮಿ.
ಕುಟುಂಬ ಸಮೇತ ಮತದಾನ ಮಾಡಿದ ಜೆಡಿಎಸ್ ನಾಯಕ ಹೆಚ್'ಡಿ. ಕುಮಾರಸ್ವಾಮಿ.

ರಾಮನಗರ: ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಬುಧವಾರ ಹೇಳಿದ್ದಾರೆ.

ಬಿಡದಿ ಪುರಸಭೆ ವ್ಯಾಪ್ತಿಯ ಕೇತಿಗಾನಹಳ್ಳಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿಂದು ಕುಮಾರಸ್ವಾಮಿಯವರು ಕುಟುಂಬ ಸಮೇತರಾಗಿ ಮತ ಚಲಾಯಿಸಿದರು.

ಕುಮಾರಸ್ವಾಮಿವಯರು ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಮತದಾನ ಮಾಡಿದರು. ಈ ವೇಳೆ ಮಾಜಿ ಕುಮಾರಸ್ವಾಮಿಯವರ ಜೊತೆಗೆ ಮಾಗಡಿ ಶಾಸಕ ಎ.ಮಂಜುನಾಥ್ ಸಾಥ್ ನೀಡಿದರು.

ಮತದಾನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿಯವರು, ಸೂಕ್ತ ಅಭಿವೃದ್ಧಿಗಾಗಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವಂದೆ ಜನರ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com