ವರುಣಾ: ಸಿಎಂ ಆಗುವ ಅವಕಾಶ ನನಗೆ ಹೆಚ್ಚು; ಬಲ ಬೆರಳಿಗೆ ಶಾಯಿ- ಕಾರಣ ಬಹಿರಂಗಪಡಿಸಿದ ಸಿದ್ದರಾಮಯ್ಯ!

ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರಸ್ ಪಕ್ಷ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು  ಹೇಳಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಮೈಸೂರು: ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾಂಗ್ರಸ್ ಪಕ್ಷ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು  ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ತೆರಳಿದರು. ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಹೊಸದಾಗಿ ಆಯ್ಕೆಯಾದ ಶಾಸಕರು ಮತ್ತು ಪಕ್ಷದ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಅಹಿಂದ ನಾಯಕ ಹೇಳಿದರು.

ಎರಡನೇ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸುವ ಅವಕಾಶವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು , ತಾವು ಸಿಎಂ ಆಗುವ ಅವಕಾಶ ಹೆಚ್ಚಿದೆ ಎಂದು ಒಪ್ಪಿಕೊಂಡರು. ಕಾಂಗ್ರೆಸ್ ಸರ್ಕಾರ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಭರವಸೆಗಳ ಅನುಷ್ಠಾನವನ್ನು ಘೋಷಿಸುತ್ತದೆ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ವ್ಯಾಪಕ ಪ್ರಚಾರಗಳು ಆಡಳಿತ ವಿರೋಧಿ ಅಂಶವನ್ನು ಹಿಮ್ಮೆಟ್ಟಿಸಲು ಸಾಧ್ಯವಾಗಲಿಲ್ಲ, ಏಕೆಂದರೆ ಜನರು ಬಿಜೆಪಿ ಸರ್ಕಾರದ ವಿರುದ್ಧ ಮತ ಚಲಾಯಿಸಲು ಮನಸ್ಸು ಮಾಡಿದ್ದಾರೆ. ಕೇಸರಿ ಪಕ್ಷವು ಯಾವಾಗಲೂ ಹಣಬಲದಿಂದ ಚುನಾವಣೆ ಗೆಲ್ಲಲು ಪ್ರಯತ್ನಿಸುತ್ತಿದೆ ಎಂದರು.

ತಮ್ಮ ಹಕ್ಕು ಚಲಾಯಿಸಲು ಆಗಮಿಸಿದ ಅವರಿಗೆ ಸಿದ್ದರಾಮನಹುಂಡಿ ಗ್ರಾಮ ಅದ್ದೂರಿ ಸ್ವಾಗತ ನೀಡಿತು. ಗ್ರಾಮಸ್ಥರು ಪಟಾಕಿ ಸಿಡಿಸಿ, ಬಾಸ್, ಬಾಸ್, ಸಿದ್ದು ಬಾಸ್ ಎಂದು ಘೋಷಣೆ ಕೂಗಿದರು.  ಸಿದ್ದರಾಮಯ್ಯ ಅವರನ್ನು ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದರು. ಅವರು  ರಸ್ತೆಗಳಲ್ಲಿ ನಡೆದು ಕೊಂಡು ಬಂದು ಮತಗಟ್ಟೆಗಳ ಉದ್ದನೆಯ ಸರತಿ ಸಾಲಿನಲ್ಲಿ ಕೈ ಬೀಸಿದರು. ಪೊಲೀಸರು ಜನರನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು.

ಬಲ ಬೆರಳಿಗೆ ಶಾಯಿ

ಎಡಗೈ ಬೆರಳಿಗೆ ಸೋಂಕು ತಗುಲಿರುವುದರಿಂದ ಸಿದ್ದರಾಮಯ್ಯ ಬಲಗೈ ತೋರು ಬೆರಳಿಗೆ ಶಾಯಿ ಹಾಕಿಸಿಕೊಂಡಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಗುರುತು ಹಾಕುವಿಕೆಯು ಸಾರ್ವಜನಿಕ ಪರಿಶೀಲನೆಗೆ ಒಳಗಾಯಿತು, ಅವರು ತಮ್ಮ ಬಲಗೈಯನ್ನು ಪ್ರದರ್ಶಿಸಿದಾಗ ಮಗ ಯತೀಂದ್ರ ಅವರು ತಮ್ಮ ಎಡಗೈಯನ್ನು ತೋರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com