ಜೆಡಿಎಸ್ ಕಿಂಗ್‌ಮೇಕರ್ ಆಗಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಅಧಿಕಾರಕ್ಕೆ ಬರುತ್ತೇವೆ: ಬೊಮ್ಮಾಯಿ

ನಾವು ಸ್ವಂತ ಬಲದಿಂದ ಸರ್ಕಾರ ರಚಿಸುತ್ತೇವೆ ಜೆಡಿಎಸ್ ಕಿಂಗ್‌ಮೇಕರ್ ಆಗುವುದಿಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಕಿಂಗ್ ಆಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Updated on

ಬೆಂಗಳೂರು: ನಾವು ಸ್ವಂತ ಬಲದಿಂದ ಸರ್ಕಾರ ರಚಿಸುತ್ತೇವೆ ಜೆಡಿಎಸ್ ಕಿಂಗ್‌ಮೇಕರ್ ಆಗುವುದಿಲ್ಲ, ಸಂಪೂರ್ಣ ಬಹುಮತ ಬರುವುದರಿಂದ ನಾವೇ ಕಿಂಗ್ ಆಗುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಬಾರಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗುವ ವಿಶ್ವಾಸವಿದೆ, ಪ್ರಧಾನಿಯವರ ವರ್ಚಸ್ಸು, ಸಾಮಾಜಿಕ ಇಂಜಿನಿಯರಿಂಗ್ ಮತ್ತು ಡಬಲ್ ಇಂಜಿನ್ ಸರ್ಕಾರದ ಕಾರ್ಯಕ್ಷಮತೆಯ ಮೇಲೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದ್ದಾರೆ.

ನಾವು ಸ್ವಂತ ಬಲದಿಂದ ಸಂಪೂರ್ಣ ಬಹುಮತ ಪಡೆಯುತ್ತೇವೆ. ಎಕ್ಸಿಟ್ ಪೋಲ್‌ಗಳು 5 ರಿಂದ 10% ಮಾತ್ರ ನಿಜವಿರುತ್ತದೆ ಇರುತ್ತದೆ. ಅದು 100% ನಿಖರವಾಗಿಲ್ಲ. ಪ್ರತಿ ಏಜೆನ್ಸಿಯು ವಿಭಿನ್ನ ಫಲಿತಾಂಶವನ್ನು ನೀಡುತ್ತದೆ, ಅದು ಸ್ಥಿರವಾಗಿಲ್ಲ. ನಮಗೆ ಸಂಪೂರ್ಣ ಬಹುಮತ ಸಿಗಲಿದೆ ಎಂಬ ಸಂಪೂರ್ಣ ಗ್ರೌಂಡ್ ರಿಪೋರ್ಟ್ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದು ಜೆಡಿಎಸ್ ಕಿಂಗ್ ಮೇಕರ್ ಆಗುವ ಪ್ರಶ್ನೆಯೇ ಇಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com