ಬಿಜೆಪಿ 'ಮ್ಯಾಜಿಕ್ ನಂಬರ್' ದಾಟಿ ಸ್ವಂತಬಲದಿಂದ ಸರ್ಕಾರ ರಚಿಸುವುದು ನಿಶ್ಚಿತ: ಪ್ರಹ್ಲಾದ್ ಜೋಷಿ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ ಮ್ಯಾಜಿಕ್ ನಂಬರ್ ನ್ನು ದಾಟಿ ನಿರಾಯಾಸವಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ಸಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ
ಸಕುಟುಂಬ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ತಿರುಪತಿ: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ ಮ್ಯಾಜಿಕ್ ನಂಬರ್ ನ್ನು ದಾಟಿ ನಿರಾಯಾಸವಾಗಿ ಸರ್ಕಾರ ರಚನೆ ಮಾಡಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
ತಿರುಪತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳೆಲ್ಲವೂ ಸುಳ್ಳಾಗಲಿದೆ ನಾಳೆ ಫಲಿತಾಂಶ ಬಂದಾಗ ನೋಡಿ ನಾವು ನಮ್ಮ ಸ್ವಂತ ಬಲದಿಂದ ಸರ್ಕಾರ ರಚಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೊನ್ನೆ ಮತದಾನಕ್ಕೆ ಮುನ್ನ ಮತ್ತು ಮತದಾನ ನಂತರ ಅಭ್ಯರ್ಥಿಗಳು, ಕರ್ನಾಟಕದ ಹಲವು ರಾಜಕೀಯ ನಾಯಕರು ದೇವರ ಮೊರೆ ಹೋಗುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಗೆಲುವು ಹಾಗೂ ಬಿಜೆಪಿ ಅಧಿಕಾರಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ತಿರುಪತಿ ತಿಮ್ಮಪ್ಪನ ಮೊರೆ ಹೋಗಿದ್ದಾರೆ. ತಿರುಪತಿಗೆ ತೆರಳಿರುವ ಪ್ರಹ್ಲಾದ್‌ ಜೋಶಿ ಬರಿಗಾಲಲ್ಲಿ ನಡೆದು ಶ್ರೀನಿವಾಸನ ದರ್ಶನ ಪಡೆದಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಚುನಾವಣೆಯನ್ನು ಗಂಭೀರವಾಗಿ ತಗೆದುಕೊಂಡಿದ್ದು, ಹೀಗಾಗಿ ಕ್ಷೇತ್ರದ ಗೆಲುವಿಗಾಗಿ ಜೋಷಿ ಮೆಟ್ಟಿಲುಗಳನ್ನು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರ ಕಳೆದ ಮೂವತ್ತು ವರ್ಷಗಳಿಂದ ಬಿಜೆಪಿ ಭದ್ರಕೋಟೆಯಾಗಿತ್ತು. ಮೂರು ದಶಕಗಳಿಂದ ಜಗದೀಶ್ ಶೆಟ್ಟರ್ ಗೆಲುವು ಸಾಧಿಸಿದ್ದರು. ಇತ್ತೀಚೆಗೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಯಿಂದ ಕ್ಷೇತ್ರವನ್ನು ಉಳಿಸಿಕೊಳ್ಳಲು ಬಿಜೆಪಿ ನಾಯಕರು ಶತಪ್ರಯತ್ನ ಮಾಡುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com