ಸಿದ್ದು ಅಥವಾ ಡಿಕೆಶಿ ಯಾರಾಗ್ತಾರೆ ನೂತನ ಸಿಎಂ? ಇಂದು ಸಂಜೆ ನಿರ್ಧಾರ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ಇಂದು ಸಂಜೆ ನಡೆಯಲಿದ್ದು, ನೂತನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸುವ ಸಾಧ್ಯತೆ ಇದೆ.
ಗೆದ್ದ ಅಭ್ಯರ್ಥಿಗಳನ್ನು ಬೆಂಗಳೂರಿಗೆ ಕರೆದೊಯ್ಯಲು ರಾಜ್ಯದ ದೂರದ ಪ್ರದೇಶಗಳಲ್ಲಿಯೂ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯತಂತ್ರಕ್ಕಾಗಿ ವೀಕ್ಷಕರನ್ನು ಸಹ ನೇಮಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
2024 ರ ಲೋಕಸಭೆ ಚುನಾವಣೆಗೂ ಮುಂಚಿತವಾಗಿ ಸ್ಪಷ್ಪ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದು, ಬಿಜೆಪಿಯನ್ನು ದಕ್ಷಿಣ ಭಾರತದಿಂದ ಹೊರಹಾಕುವಲ್ಲಿ ಯಶಸ್ವಿಯಾಗಿದೆ. ಸಾಮೂಹಿಕ ನಾಯಕತ್ವ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಆಕ್ರಮಣಕಾರಿ ಪ್ರಚಾರದ ನಂತರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿರ್ಣಾಯಕ ಗೆಲುವು ಸಾಧಿಸಿದೆ.
75 ವರ್ಷದ ಸಿದ್ದರಾಮಯ್ಯ ಮತ್ತು ಕನಕಪುರದಿಂದ ಒಂದು ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದಿರುವ ಪಕ್ಷದ ಟ್ರಬಲ್ ಶೂಟರ್ ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯಲ್ಲಿದ್ದಾರೆ. ಇವರಿಬ್ಬರಲ್ಲಿ ಯಾರು ರಾಜ್ಯದ ಮುಂದಿನ ಸಿಎಂ ಆಗ್ತಾರೆ ಎಂಬುದು ಇಂದು ತೀರ್ಮಾನವಾಗಲಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ