ಕಾಂಗ್ರೆಸ್ ಶಾಸಕಾಂಗ ಸಭೆಗೆ ವೇದಿಕೆ ಸಜ್ಜು, ಸೋಮವಾರ ನೂತನ ಸಿಎಂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ಬೆಂಗಳೂರು: ಶನಿವಾರ ಸಂಜೆ ಇಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನೂತನ ಮುಖ್ಯಮಂತ್ರಿ ಆಯ್ಕೆಗೆ ವೇದಿಕೆ ಸಜ್ಜಾಗಿದೆ. ಮೂಲಗಳ ಪ್ರಕಾರ, ಸೋಮವಾರ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಯಲಿದ್ದು, ಹೊಸದಾಗಿ ಆಯ್ಕೆಯಾದ 135 ಕಾಂಗ್ರೆಸ್ ಶಾಸಕರು ಭಾಗವಹಿಸಿ ತಮ್ಮ ನಾಯಕನನ್ನು ಆಯ್ಕೆ ಮಾಡಲಿದ್ದಾರೆ. ಬಳಿಕ ಹೈಕಮಾಂಡ್ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ. ಸಂಜೆ 6 ಗಂಟೆಗೆ ಸಭೆ ಆರಂಭವಾಗಲಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಎಂ.ಬಿ. ಪಾಟೀಲ್, ಶಾಮನೂರು ಶಿವಶಂಕರಪ್ಪ, ಡಾ.ಜಿ. ಪರಮೇಶ್ವರ, ಆರ್.ವಿ. ದೇಶಪಾಂಡೆ, ಎಚ್.ಕೆ. ಪಾಟೀಲ್ ಸಿಎಂ ಸ್ಥಾನದ ರೇಸ್‌ನಲ್ಲಿದ್ದಾರೆ.
ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಹುದ್ದೆಯ ಬಗ್ಗೆ ಆಸಕ್ತಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಏನು ಬೇಕಾದರೂ ಆಗಬಹುದು ಎಂದು ಮೂಲಗಳು ಹೇಳಿವೆ. ಸದ್ಯ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿದ್ದಾರೆ.
ಮೊದಲ ಎರಡು ವರ್ಷ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಲಿದ್ದು, ಮುಂದಿನ ಮೂರು ವರ್ಷ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಿವಕುಮಾರ್ ನೇತೃತ್ವದಲ್ಲಿ 2028ರ ಚುನಾವಣೆಗೆ ಪಕ್ಷವು ಚಿಂತನೆ ನಡೆಸುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ