ಅಗತ್ಯವಿದ್ದರೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ ರನ್ನು ದೆಹಲಿಗೆ ಕರೆಸಲಾಗುವುದು: ಸುಶೀಲ್ ಕುಮಾರ್ ಶಿಂಧೆ

ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಸಮಾಲೋಚನೆಗಾಗಿ ದೆಹಲಿಗೆ ಕರೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಅವರು ಸೋಮವಾರ ಹೇಳಿದರು.
ಸುಶೀಲ್ ಕುಮಾರ್ ಶಿಂಧೆ
ಸುಶೀಲ್ ಕುಮಾರ್ ಶಿಂಧೆ

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿರುವ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಸಮಾಲೋಚನೆಗಾಗಿ ದೆಹಲಿಗೆ ಕರೆಸಲಾಗುವುದು ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಅವರು ಸೋಮವಾರ ಹೇಳಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರೊಂದಿಗೆ ನಾವು ವೀಕ್ಷಕರು ದೆಹಲಿಗೆ ಹೋಗುತ್ತೇವೆ ಎಂದು ಶಿಂಧೆ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

'ನಮ್ಮ ವರದಿ (ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವೀಕರಿಸಿದ ಪ್ರತಿಕ್ರಿಯೆ) ರಹಸ್ಯವಾಗಿದೆ. ನಾವು ಅದನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅದನ್ನು ಬಹಿರಂಗಪಡಿಸಲು ಸಾಧ್ಯ' ಎಂದರು.
ಅಗತ್ಯವಿದ್ದರೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಲಾಗುವುದು ಎಂದು ತಿಳಿಸಿದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರನ್ನು ಸಿಎಲ್‌ಪಿ ನಾಯಕನ ಆಯ್ಕೆಗೆ ವೀಕ್ಷಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.

ಭಾನುವಾರ ನಡೆದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

224 ಸದಸ್ಯ ಬಲದ ವಿಧಾನಸಭೆಗೆ ಮೇ 10ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದಿವೆ. ಮೇ 13ರಂದು ಫಲಿತಾಂಶ ಪ್ರಕಟವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com