ಮುಖ್ಯಮಂತ್ರಿ ಸ್ಥಾನಕ್ಕೆ ಒತ್ತಾಯಿಸಿ ಖರ್ಗೆಗೆ ವೀರಶೈವ ಮಹಾಸಭಾ ಪತ್ರ; ಡಿಸಿಎಂ ಹುದ್ದೆಗಾಗಿ ಇತರ ಸಮುದಾಯಗಳ ಲಾಬಿ

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ.
ಮಲ್ಲಿಕಾರ್ಜನ ಖರ್ಗೆ
ಮಲ್ಲಿಕಾರ್ಜನ ಖರ್ಗೆ
Updated on

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಯ್ಕೆಗಾಗಿ ಕಚ್ಚಾಟ ತೀವ್ರಗೊಂಡಿದ್ದು, ಅಖಿಲ ಭಾರತ ವೀರಶೈವ ಮಹಾಸಭಾ ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದು ಸಮುದಾಯಕ್ಕೆ ಪ್ರತಿಷ್ಠಿತ ಹುದ್ದೆ ನೀಡುವಂತೆ ಒತ್ತಾಯಿಸಿದೆ.

ಕಾಂಗ್ರೆಸ್‌ನಿಂದ 34 ಚುನಾಯಿತ ಶಾಸಕರು ಲಿಂಗಾಯತರಾಗಿರುವುದರಿಂದ ಅವರ ಬೇಡಿಕೆಯನ್ನು ಪರಿಗಣಿಸಬೇಕು ಎಂದು ಮಹಾಸಭಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದೆ.

'ಪಕ್ಷವು 46 ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದು, ಅದರಲ್ಲಿ 34 ಮಂದಿ ಗೆದ್ದಿದ್ದಾರೆ. ಇತರ 50 ಸ್ಥಾನಗಳಲ್ಲಿ ಶಾಸಕರನ್ನು ಆಯ್ಕೆ ಮಾಡುವಲ್ಲಿ ಸಮುದಾಯವು ಪ್ರಮುಖ ಪಾತ್ರ ವಹಿಸಿದೆ. ಸಮುದಾಯವು ಬಿಜೆಪಿಯಿಂದ ಕಾಂಗ್ರೆಸ್‌ಗೆ ತನ್ನ ನಿಷ್ಠೆಯನ್ನು ಬದಲಾಯಿಸಿದೆ' ಎಂದು ಪತ್ರದಲ್ಲಿ ಹೇಳಲಾಗಿದೆ.

ಇದೇ ವೇಳೆ ಇತರ ಸಮುದಾಯದವರೂ ತಮ್ಮ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿವೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಬೆಳಗಾವಿ ಉತ್ತರ ಶಾಸಕ ಆಸೀಫ್ ಸೇಠ್ ಒತ್ತಾಯಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಸತೀಶ್ ಜಾರಕಿಹೊಳಿ ನಾಯಕ. ಅವರಿಗೆ ಹುದ್ದೆ ನೀಡಬೇಕು. ಹಿರಿಯ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಪಕ್ಷದ ವಿವೇಚನೆಗೆ ಬಿಟ್ಟ ವಿಚಾರ ಎಂದು ಸೇಠ್ ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಹಿರಿಯ ಮುಖಂಡ ರಾಮಲಿಂಗಾರೆಡ್ಡಿ ಬೆಂಬಲಿಗರು ಕೂಡ ಅವರಿಗೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರೆಡ್ಡಿ ಜನಸಂಘದ ಸಂಚಾಲಕ, ರಾಮಲಿಂಗಾರೆಡ್ಡಿ ಸಮುದಾಯದ ಹಿರಿಯ ನಾಯಕ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಗಿಂತ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರಾಮಲಿಂಗಾ ರೆಡ್ಡಿ ಅವರು ಉಪಮುಖ್ಯಮಂತ್ರಿಯಾಗಲು ಅರ್ಹರು ಎಂದು ಹೇಳಿದರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮೂವರನ್ನು ಸಚಿವರನ್ನಾಗಿಸಿದ್ದರು. ‘ಅವರ ನಂತರ ಒಂದೇ ಒಂದು ಸಚಿವ ಸ್ಥಾನ ನೀಡಿದ್ದು, ಬಿಜೆಪಿ ಅದಕ್ಕೀಗ ಬೆಲೆ ತೆತ್ತಿದೆ. ರಾಮಲಿಂಗಾ ರೆಡ್ಡಿ ಅವರನ್ನು ಡಿಸಿಎಂ ಮಾಡಬೇಕು ಹಾಗೂ ಸಮುದಾಯದ ಇಬ್ಬರನ್ನು ಸಚಿವರನ್ನಾಗಿ ಮಾಡಬೇಕು’ ಎಂದು ಆಗ್ರಹಿಸಿದರು.

ನಾವು ಕಾಂಗ್ರೆಸ್ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ. ಅವರು ಪ್ರತಿಕ್ರಿಯಿಸದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷವು ಸಮುದಾಯದಿಂದ ತೀವ್ರ ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ಅವರಿಗೆ ಸ್ಥಾನ ನೀಡುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com