ಸೌಮ್ಯ ರೆಡ್ಡಿಗೆ ಆಗಿರುವ ಅನ್ಯಾಯದ ವಿರುದ್ಧ ಹೋರಾಟ: ರಾಮಲಿಂಗಾರೆಡ್ಡಿ

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ

ಬೆಂಗಳೂರು: ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಆಗಿರುವ ಅನ್ಯಾಯದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಜಯನಗರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ಅವರಿಗೆ ಅನ್ಯಾಯವಾಗಿದೆ ಎಂದ ಅವರು, ಈ ಬಗ್ಗೆ ಪಕ್ಷ ಕಾನೂನು ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.

ಚುನಾವಣಾ ಅಧಿಕಾರಿಯು ಅಸಿಂಧು ಎಂದು ಪರಿಗಣಿಸಿದ 250 ಮತಗಳನ್ನು ಕೆಲವು ಕಾಣದ ಕೈಗಳ ಒತ್ತಡದಿಂದಾಗಿ ಎಣಿಕೆ ಪ್ರಕ್ರಿಯೆಯಲ್ಲಿ ಸೇರಿಸಿರುವುದು ನಮಗೆ ಆಶ್ಚರ್ಯ ತಂದಿದೆ. ಒಂದು ಬಾರಿ ಅಸಿಂಧು ಎಂದು ಪರಿಗಣಿಸಿದ ಮತಗಳನ್ನು ಮತ ಎಣಿಕೆ ಪ್ರಕ್ರಿಯೆಯಲ್ಲಿ ಸೇರಿಸುವಂತಿಲ್ಲ. ಮರು ಮತ ಎಣಿಕೆ ಪ್ರಕ್ರಿಯೆಯಲ್ಲಿ ಉತ್ತರಪ್ರದೇಶದ ಕೆಲವು ರಾಜಕಾರಣಿಗಳು ಮತ್ತು ಮಾಜಿ ಸಚಿವ ಆರ್ ಅಶೋಕ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಪ್ರಭಾವವಿದೆ ಎಂದು ಆರೋಪಿಸಿದರು.

ಚುನಾವಣಾಧಿಕಾರಿಗಳ ಕೊಠಡಿಯೊಳಗೆ ವೀಕ್ಷಕರು ಕುಳಿತಿದ್ದರು ಎಂದು ಆರೋಪಿಸಿದ ರೆಡ್ಡಿ, ಅಲ್ಲಿದ್ದ ತೇಜಸ್ವಿ ಸೂರ್ಯ ಮತ್ತು ಅಶೋಕ ಅಭ್ಯರ್ಥಿಗಳ ಏಜೆಂಟರೂ ಅಲ್ಲ, ಅಭ್ಯರ್ಥಿಗಳೂ ಅಲ್ಲ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ತಮ್ಮ ಪ್ರಭಾವ ಬಳಸಿ ಈ ರೀತಿ ಮಾಡಿದ್ದಾರೆ ಎಂದು ಅವರು ಹೇಳಿದರು.

ತಮ್ಮಗೆ ಆಗಿರುವ ಘೋರ ಅನ್ಯಾಯ"ದ ವಿರುದ್ಧ ಹೋರಾಡುತ್ತೇನೆ ಎಂದು ಸೌಮ್ಯ ರೆಡ್ಡಿ ತಿಳಿಸಿದ್ದಾರೆ. ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ಪ್ರಕಾರ, ಅವರು ಕೊನೆಯ ಸುತ್ತಿನಲ್ಲಿ ಸುಮಾರು 160 ಮತಗಳಿಂದ ಮುಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com