ಸಿದ್ದರಾಮಯ್ಯ ಸಂಪುಟದ 8 ನೂತನ ಸಚಿವರ ಸಂಕ್ಷೀಪ್ತ ವಿವರ

ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಸಂಪುಟ ದರ್ಜೆ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ...
ಸಿದ್ದರಾಮಯ್ಯ ಸಂಪುಟದ 8 ನೂತನ ಸಚಿವರು
ಸಿದ್ದರಾಮಯ್ಯ ಸಂಪುಟದ 8 ನೂತನ ಸಚಿವರು

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಸಂಪುಟ ದರ್ಜೆ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಂಟು ಶಾಸಕ ಸಂಕ್ಷಿಪ್ತ ವಿವರ ಇಲ್ಲಿದೆ.

1. ಜಿ ಪರಮೇಶ್ವರ್:
ಈ ಬಾರಿಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ನ ಪ್ರಣಾಳಿಕೆ ಸಮಿತಿಯ ನೇತೃತ್ವ ವಹಿಸಿದ್ದರು.
ಎಸ್ಸಿ-ಬಲ ಸಮುದಾಯಕ್ಕೆ ಸೇರಿದ ಪರಮೇಶ್ವರ್ ಅವರು ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿ(ಎಸ್) ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.
ಹಿಂದಿನ ಸರ್ಕಾರಗಳಲ್ಲಿ ಗೃಹ, ಉನ್ನತ ಶಿಕ್ಷಣ ಸೇರಿದಂತೆ ವಿವಿಧ ಪ್ರಮುಖ ಖಾತೆಗಳನ್ನು ನಿರ್ವಹಿಸಿದ್ದಾರೆ.
ಎಂಟು ವರ್ಷಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.
ಆರು ಬಾರಿ ಶಾಸಕರಾಗಿದ್ದಾರೆ. ಮಧುಗಿರಿ ಮತ್ತು ಕೊರಟಗೆರೆಯಿಂದ ತಲಾ ಮೂರು ಬಾರಿ ಆಯ್ಕೆಯಾಗಿದ್ದಾರೆ.

2. ಕೆ ಎಚ್ ಮುನಿಯಪ್ಪ:
ಎಸ್‌ಸಿ-ಎಡ ಸಮುದಾಯಕ್ಕೆ ಸೇರಿದ ಕಾಂಗ್ರೆಸ್ ನಾಯಕರಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
1991 ರಿಂದ 2019 ರವರೆಗೆ ಕೋಲಾರವನ್ನು ಪ್ರತಿನಿಧಿಸಿ ಏಳು ಬಾರಿ ಲೋಕಸಭಾ ಸದಸ್ಯರಾಗಿ ಮತ್ತು
ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಈಗ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಮಗಳು ರೂಪಕಲಾ ಎಂ ಶಶಿಧರ್ ಕೋಲಾರ ಗೋಲ್ಡ್ ಫೀಲ್ಡ್ಸ್ (ಕೆಜಿಎಫ್) ಶಾಸಕಿ.

3. ಕೆ ಜೆ ಜಾರ್ಜ್:
ಕಾಂಗ್ರೆಸ್‌ನ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದು, ಬೆಂಗಳೂರಿನ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಆರು ಬಾರಿ ಶಾಸಕರಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ಆಪ್ತ ಎಂದು ಪರಿಗಣಿಸಲಾಗಿದೆ.
ಈ ಹಿಂದೆ ಗೃಹ, ಬೆಂಗಳೂರು ಅಭಿವೃದ್ಧಿ ಸೇರಿದಂತೆ ಹಲವು ಖಾತೆಗಳನ್ನು ನಿರ್ವಹಿಸಿದ್ದಾರೆ.
ಕೇರಳದ ಮೂಲದ ಕೆ ಜೆ ಜಾರ್ಜ್ ಅವರು ಚಿಕ್ಕವರಿದ್ದಾಗ ಅವರ ಕುಟುಂಬ ಕೊಡಗಿಗೆ ಸ್ಥಳಾಂತರಗೊಂಡಿತು.

4. ಎಂ ಬಿ ಪಾಟೀಲ್:
ಪ್ರಬಲ ಲಿಂಗಾಯತ ಸಮುದಾಯದ ಕಾಂಗ್ರೆಸ್‌ನ ಪ್ರಮುಖ ನಾಯಕ ಎಂದು ಪರಿಗಣಿಸಲಾಗಿದೆ.
ಉತ್ತರ ಕರ್ನಾಟಕ ಪ್ರದೇಶದ ಪ್ರಮುಖ ಶಿಕ್ಷಣ ಸಂಸ್ಥೆಯಾದ BLDEA(ಬಿಜಾಪುರ ಲಿಂಗಾಯತ ಶಿಕ್ಷಣ ಸಂಘ) ಅಧ್ಯಕ್ಷ.
ಈ ಚುನಾವಣೆಗೂ ಮುನ್ನ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿದ್ದರು.
ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿಂದಿನ ಸರ್ಕಾರಗಳಲ್ಲಿ ಗೃಹ ಮತ್ತು ಜಲಸಂಪನ್ಮೂಲ ಸಚಿವರಾಗಿದ್ದರು.

5. ಸತೀಶ್ ಜಾರಕಿಹೊಳಿ
ಬರುವ ವಾಲ್ಮೀಕಿ ಸಮುದಾಯದ ಪ್ರಬಲ ನಾಯಕರಾಗಿದ್ದು, ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿದ್ದು, ನಾಲ್ಕು ಬಾರಿ ಎಂಎಲ್ಎ, ಎರಡು ಬಾರಿ ಎಂಎಲ್ಸಿಯಾಗಿದ್ದಾರೆ. 
ಈ ಹಿಂದೆ ಜೆಡಿ(ಎಸ್)ನಲ್ಲಿದ್ದರು. ಅವರ ಸಹೋದರರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಕ್ರಮವಾಗಿ ಗೋಕಾಕ ಮತ್ತು ಅರಭಾವಿ ವಿಧಾನಸಭಾ ಕ್ಷೇತ್ರಗಳಿಂದ ಬಿಜೆಪಿ ಶಾಸಕರಾಗಿದ್ದಾರೆ.
ಈ ಹಿಂದೆ ಅಬಕಾರಿ ಮತ್ತು ಜವಳಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಢನಂಬಿಕೆ ವಿರೋಧಿ ನಿಲುವಿನಿಂದ ಜನಪ್ರಿಯರಾಗಿರುವ ಸತೀಶ್ ಜಾರಕಿಹೊಳಿ ಅವರು ಸತೀಶ್ ಶುಗರ್ಸ್ ಸಂಸ್ಥಾಪಕ ಅಧ್ಯಕ್ಷರಾಗಿದ್ದಾರೆ.

6. ಪ್ರಿಯಾಂಕ್ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ
ಎಸ್ಸಿ-ಬಲ ಸಮುದಾಯದ ನಾಯಕರಾಗಿದ್ದು, ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.
ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಈ ಹಿಂದೆ ಐಟಿ, ಬಿಟಿ, ಪ್ರವಾಸೋದ್ಯಮ ಮತ್ತು ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

7. ರಾಮಲಿಂಗಾ ರೆಡ್ಡಿ:
ರೆಡ್ಡಿ ಸಮುದಾಯಕ್ಕೆ ಸೇರಿದ ನಾಯಕರಾಗಿದ್ದು, ಬೆಂಗಳೂರು ನಗರದ ಬಿಟಿಎಂ ಲೇಔಟ್ ಅನ್ನು ಪ್ರತಿನಿಧಿಸುತ್ತಾರೆ.
ಕರ್ನಾಟಕ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿರುವ ರಾಮಲಿಂಗಾ ರೆಡ್ಡಿ ಅವರು ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಗೃಹ, ಸಾರಿಗೆ, ಶಿಕ್ಷಣ ಮತ್ತು ಇತರ ಪ್ರಮುಖ ಖಾತೆಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನ ವಿದ್ಯಾರ್ಥಿ ಘಟಕದೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದರು.

8. ಬಿ ಝಡ್ ಜಮೀರ್ ಅಹ್ಮದ್ ಖಾನ್:
ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್‌ನ ಪ್ರಮುಖ ಮುಸ್ಲಿಂ ಮುಖಂಡರಾಗಿದ್ದಾರೆ.
ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು, ಹಜ್ ಮತ್ತು ವಕ್ಫ್ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com