ಎಸ್ ಎಂ ಕೃಷ್ಣ ನಂತರ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಭೇಟಿಯಾದ ಡಿಕೆಶಿ!

ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಹುಮ್ಮಸ್ಸಿನಲ್ಲಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷ ಬೇಧ ಮರೆತು ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡುವ ಮೂಲಕ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.
ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್
ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್
Updated on: 

ಬೆಂಗಳೂರು: ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ಹುಮ್ಮಸ್ಸಿನಲ್ಲಿರುವ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಪಕ್ಷ ಬೇಧ ಮರೆತು ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡುವ ಮೂಲಕ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ.

ಇಂದು ಬೆಳಗ್ಗೆ ಬಿಜೆಪಿ ಹಿರಿಯ ಮುಖಂಡ ಎಸ್ ಎಂ ಕೃಷ್ಣ ಅವರನ್ನು ಭೇಟಿಯಾಗಿದ್ದ ಡಿಕೆ ಶಿವಕುಮಾರ್, ಸಂಜೆ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಪದ್ಮನಾಭ ನಗರದಲ್ಲಿರುವ ನಿವಾಸಕ್ಕೆ ತೆರಳಿ ದೇವೇಗೌಡ ಅವರನ್ನು ಭೇಟಿಯಾಗಿದ್ದು, ಅವರ ಕಾಲುಗಳಿಗೆ ನಮಸ್ಕರಿಸಿ, ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಆಶೀರ್ವಾದ ಪಡೆದುಕೊಂಡಿದ್ದಾರೆ.

ಇದೇ ಸಂದರ್ಭದಲ್ಲಿ ದೇವೇಗೌಡರ ಆರೋಗ್ಯ ಸೇರಿದಂತೆ ಹಲವು ವಿಚಾರ ಕುರಿತು ಮಾತುಕತೆ ನಡೆಸಿದ್ದಾರೆ. ಶಾಸಕ ಶರತ್ ಬಚ್ಚೇಗೌಡ ಸೇರಿದಂತೆ ಹಲವು ಮಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. 

ಇದಕ್ಕೂ ಮುನ್ನಾ ಸದಾಶಿವ ನಗರದ ನಿವಾಸಕ್ಕೆ ತೆರಳಿ ಎಸ್‌ಎಂ ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ. ಭಾನುವಾರ ರಾಜೀವ್ ಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ನಾನು ಎಸ್‌ಎಂ ಕೃಷ್ಣ ಶಿಷ್ಯನಲ್ಲ, ನಾನು ಬಂಗಾರಪ್ಪ ಶಿಷ್ಯ ಎಂದು ಹೇಳಿ ಅಚ್ಚರಿ ಮೂಡಿಸಿದ್ದ ಶಿವಕುಮಾರ್‌ ಮರುದಿನವೇ ಮಾಜಿ ಮುಖ್ಯಮಂತ್ರಿ ಭೇಟಿಯಾಗುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದ್ದಾರಾ ಎಂಬ ಮಾತು ಕೇಳಿ ಬಂದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com