ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ

ಸಂಪುಟ ಸರ್ಕಸ್: ಅಂತಿಮ ಸುತ್ತಿನ ಚರ್ಚೆ ಬಳಿಕ ಬೆಂಗಳೂರಿಗೆ ಸಿಎಂ ಸಿದ್ದರಾಮಯ್ಯ ವಾಪಸ್

ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ.

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್​ ನಾಯಕರೊಂದಿಗೆ ಅಂತಿಮ ಸುತ್ತಿನ ಚರ್ಚೆಯ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾರೆ. 

ಸಿದ್ದರಾಮಯ್ಯ ಅವರು ಇಂದು ರಾತ್ರಿ 9.30ಕ್ಕೆ ಬೆಂಗಳೂರು ತಲುಪಲಿದ್ದು, ರಾತ್ರಿಯೊಳಗೆ ನಾಳೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ 23 ಶಾಸಕರಿಗೆ ಕರೆ ಮಾಡಿ ಮಾಹಿತಿ ನೀಡುವ ಸಾಧ್ಯತೆ ಇದೆ. ಅಲ್ಲದೆ ಕಾಂಗ್ರೆಸ್ ಹೈಕಮಾಂಡ್ ಇಂದು ರಾತ್ರಿಯೇ ನೂತನ ಸಚಿವರ ಪಟ್ಟಿಯನ್ನು ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ.

ನಾಳೆ ಬೆಳಗ್ಗೆ 11.45ಕ್ಕೆ ನೂತನ ಸಚಿವರ ಪದಗ್ರಹಣ ನಡೆಯಲಿದ್ದು, ಒಟ್ಟು 24 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸರ್ಕಾರದ ಮನವಿ ಮೇರೆಗೆ ಶನಿವಾರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ರಾಜ್ಯಪಾಲರು ಈಗಾಗಲೇ ಒಪ್ಪಿಗೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಂಪುಟದಲ್ಲಿ ಯಾರನ್ನು ಸೇರಿಸಿಕೊಳ್ಳಬೇಕು ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಧಾರ ಮಾಡುತ್ತಾರೆ. ಹಲವು ಹೆಸರುಗಳನ್ನು ಅವರು ಮುಂದಿಟ್ಟಿದ್ದಾರೆ. ಎಲ್ಲವೂ ಕೂಡ ಸಿಎಂ ಸಿದ್ದರಾಮಯ್ಯ ಅವರ ವಿವೇಚನೆಗೆ ಬಿಡಲಾಗಿದೆ. ನಾಳೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com