ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಪ್ರಮುಖರು ಇವರೇ ನೋಡಿ...

ರಾಜ್ಯ ರಾಜಧಾನಿ ಬೆಂಗಳೂರಿನ ರಾಜಭವನದಲ್ಲಿ 24 ಶಾಸಕರು ಇಂದು ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ರಾಜಭವನದಲ್ಲಿ 24 ಶಾಸಕರು ಇಂದು ಶನಿವಾರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮೂರು ದಿನಗಳ ಕಾಲ ದೆಹಲಿಯಲ್ಲಿ ಮೊಕ್ಕಾಂ ಹೂಡಿ 24 ಸಚಿವ ಸ್ಥಾನಗಳಿಗೆ ಶಾಸಕರ ಹೆಸರನ್ನು ಅಂತಿಮಗೊಳಿಸಿ ಅವರ ಪ್ರಮಾಣ ವಚನ ಕೂಡ ಮುಗಿದಿದೆ. ಕಾಂಗ್ರೆಸ್ ಹೈಕಮಾಂಡ್ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ. ಅದರಂತೆ ರಾಜ್ಯದ ಹಲವಾರು ಪ್ರಮುಖ ಕಾಂಗ್ರೆಸ್ ನಾಯಕರಿಗೆ ಸಚಿವ ಸ್ಥಾನ ಕೈತಪ್ಪಿಹೋಗಿದೆ. 

ಆರ್.ವಿ.ದೇಶಪಾಂಡೆ
ಒಂಬತ್ತು ಬಾರಿ ಶಾಸಕರಾಗಿ ಹಾಗೂ ಮಾಜಿ ಸಚಿವರಾಗಿದ್ದ ಇವರು ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಪ್ರಮಾಣ ವಚನ ಬೋಧಿಸಲು ಹಂಗಾಮಿ ಸ್ಪೀಕರ್ ಆಗಿದ್ದರು. ಹಳಿಯಾಳದ 76 ವರ್ಷದ ಆರ್ ವಿ ದೇಶಪಾಂಡೆಯವರಿಗೆ ಸ್ಪೀಕರ್ ಸ್ಥಾನವನ್ನು ವರಿಷ್ಠರು ನೀಡಿದರೂ ಅವರು ಒಪ್ಪಲಿಲ್ಲ. ಅವರು ಕ್ಯಾಬಿನೆಟ್ ಸ್ಥಾನದ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದರು ಆದರೆ ಕಾಂಗ್ರೆಸ್ ಅವರನ್ನು ನಿರಾಕರಿಸಿದೆ. 

ಲಕ್ಷ್ಮಣ ಸವದಿ
ಬೆಳಗಾವಿ ಜಿಲ್ಲೆಯ ಅಥಣಿಯ 63 ವರ್ಷದ ನಾಯಕನಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಕಾಂಗ್ರೆಸ್ ಸೇರಿದರು. ಕಾಂಗ್ರೆಸ್ ಅವರನ್ನು ಮುಕ್ತಕಂಠದಿಂದ ಸ್ವಾಗತಿಸಿ ಅಥಣಿಯಿಂದ ಟಿಕೆಟ್ ನೀಡಿತು. ಕ್ಷೇತ್ರದಿಂದ ಗೆದ್ದು ಕಾಗವಾಡ ಮತ್ತು ಕುಡಚಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕ ಪ್ರಚಾರ ನಡೆಸಿದರು. ಲಿಂಗಾಯತ ನಾಯಕ ಕ್ಯಾಬಿನೆಟ್ ಸ್ಥಾನದ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷವು ಅವರನ್ನು ನಿರಾಕರಿಸಿದೆ. ಸಚಿವ ಸ್ಥಾನ ನಿರಾಕರಿಸಿದ್ದಕ್ಕೆ ಅವರ ಬೆಂಬಲಿಗರು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕಾಶ ಹುಕ್ಕೇರಿ
ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವರು, ಶಾಸಕರು ಮತ್ತು ಸಂಸದರು ಪ್ರಸ್ತುತ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 76 ವರ್ಷದ ಅವರು ಎಂಎಲ್‌ಸಿ ಕೋಟಾದಲ್ಲಿ ಕ್ಯಾಬಿನೆಟ್ ಸ್ಥಾನವನ್ನು ನಿರೀಕ್ಷಿಸುತ್ತಿದ್ದರು ಆದರೆ ವಯಸ್ಸಿನ ಅಂಶದಿಂದಾಗಿ ಕಾಂಗ್ರೆಸ್ ಅವರನ್ನು ನಿರಾಕರಿಸಿದೆ. ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು.

ಟಿ.ಬಿ.ಜಯಚಂದ್ರ
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ಸಂಪುಟ ಸ್ಥಾನವನ್ನು ನಿರಾಕರಿಸಲಾಗಿದೆ. 6 ಬಾರಿ ಶಾಸಕರಾಗಿರುವ ಇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು. 2018 ರ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ, ಅವರು ಇತ್ತೀಚೆಗೆ ಮುಗಿದ ಚುನಾವಣೆಯಲ್ಲಿ ಸಿರಾ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.

ಬಿ ಕೆ ಹರಿಪ್ರಸಾದ್
ಬಿಲ್ಲವ ಸಮುದಾಯಕ್ಕೆ ಸೇರಿದ 68 ವರ್ಷದ ನಾಯಕ ಅವರು ವಿಧಾನ ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿದ್ದರು. ಅವರು ಹಾಲಿ ಎಂಎಲ್‌ಸಿ. ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲು ಹಲವು ದಿನಗಳಿಂದ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದ ಅವರಿಗೆ ಹೈಕಮಾಂಡ್‌ ಮನಸೋತಿರಲಿಲ್ಲ. ಹರಿಪ್ರಸಾದ್ ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.

ಅಜಯ್ ಸಿಂಗ್, ಅಶೋಕ್ ಪಟ್ಟಣ್, ಗಣೇಶ್ ಹುಕ್ಕೇರಿ, ರಿಜ್ವಾನ್ ಅರ್ಷದ್, ವಿನಯ್ ಕುಲಕರ್ಣಿ ಮತ್ತು ಎನ್‌ಎ ಹ್ಯಾರಿಸ್ ಕ್ಯಾಬಿನೆಟ್ ಸ್ಥಾನವನ್ನು ಕಳೆದುಕೊಂಡ ಇತರರಲ್ಲಿ ಪ್ರಮುಖರು. 

Related Stories

No stories found.

Advertisement

X
Kannada Prabha
www.kannadaprabha.com