ಸಿದ್ದರಾಮಯ್ಯ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್‌!

ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.
ಲಕ್ಷ್ಮೀ ಹೆಬ್ಬಾಳ್ಕರ್'ಗೆ ಆಶೀರ್ವದಿಸುತ್ತಿರುವ ಸಿಎಂ ಸಿದ್ದರಾಮಯ್ಯ.
ಲಕ್ಷ್ಮೀ ಹೆಬ್ಬಾಳ್ಕರ್'ಗೆ ಆಶೀರ್ವದಿಸುತ್ತಿರುವ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಈ ಬಾರಿ ಏಕೈಕ ಮಹಿಳೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ.

ಬೆಳಗಾವಿಯ ಧೀರ ರಾಜಕಾರಣಿಯಾಗಿರವ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಕಳೆದ ಒಂದೂವರೆ ದಶಕಗಳ ಕಾಲ ಸಕ್ರಿಯ ರಾಜಕಾರಣದಲ್ಲಿದ್ದಾರೆ.

1975 ಮೇ 28 ರಂದು ಬೆಳಗಾವಿ ಜಿಲ್ಲೆಯ ಹಟ್ಟಿ ಹೊಳಿಯಲ್ಲಿ ಜನಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು, ಮೈಸೂರು ವಿಶ್ವ ವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದಲ್ಲಿ ಎಂ. ಎ. ಪದವಿ ಪಡೆದಿದ್ದಾರೆ. ಪತಿ ರವೀಂದ್ರ ಹೆಬ್ಬಾಳಕರ್, ಪತ್ರ ಮೃಣಾಲ್ ಹೆಬ್ಬಾಳಕರ್‌.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ಸಮರ್ಥ ಸೇವೆ ಸಲ್ಲಿಸಿರುವ ಇವರು, 2013 ರಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಬಳಿಕ 2014 ರ ಲೋಕಸಭಾ ಚುನಾವಣೆಯಲ್ಲೂ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸಿ ಪರಾಜಯ ಹೊಂದಿದ್ದರು.

ಸೋಲುಗಳಿಂದ ಧೃತಿಗೆಡದ ಅವರು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುವುದನ್ನು ಮುಂದುವರೆಸಿದರು. ಶಾಸಕಿಯಲ್ಲದಿದ್ದರೂ ಓರ್ವ ಶಾಸಕರು ಮಾಡಿದ್ದಕ್ಕಿಂತ ಹೆಚ್ಚಿನ ಕೆಲಸವನ್ನು ಕ್ಷೇತ್ರಕ್ಕೆ ತಂದಿದ್ದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅಭೂತಪೂರ್ವ ಜಯ ಸಾಧಿಸಿದರು. ಒಟ್ಟು 1,02,040 ಮತಗಳನ್ನು ಪಡೆದ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಎದುರಾಳಿ ಬಿಜೆಪಿ ಅಭ್ಯರ್ಥಿಯನ್ನು 51,680 ಮತಗಳ ಅಂತರದಿಂದ ಸೋಲಿಸುವ ಮೂಲಕ ಆ ಅವಧಿಯಲ್ಲಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಅತೀ ಹೆಚ್ಚು ಮತಗಳ ಅಂತರದ ಜಯ ಸಾಧಿಸಿದ ಕೀರ್ತಿಗೆ ಪಾತ್ರರಾದರು.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಟ್ಟಾ ಅನುಯಾಯಿಯಾಗಿದ್ದ ಲಕ್ಷ್ಮೀ ಹೆಬ್ಬಾಳಾಕರ್ ಅವರು. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ತಮ್ಮ ಕಿರಿಯ ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರನ್ನು ಎಂಎಲ್ಸಿಯಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

2019 ರಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಸಂಪರ್ಕಿಸಲಾಗಿದ್ದ ಶಾಸಕರ ಪೈಕಿ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಒಬ್ಬರಾಗಿದ್ದರು ಎಂದು ಹೇಳಲಾಗಿತ್ತು.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಬೀಳಿಸಲು ರಮೇಶ್ ಜಾರಕಿಹೊಳಿ ಸೇರಿ 17 ಮಂದಿ ಶಾಸಕರು ಕಾಂಗ್ರೆಸ್-ಜೆಡಿಎಸ್ ಪಕ್ಷವನ್ನು ತೊರೆದು, ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈ ಮೂಲಕ ಬಿಜೆಪಿ ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ನೆರವಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com