ಸಚಿವ ಸ್ಥಾನ ಮಿಸ್: ಲಕ್ಷ್ಮಣ ಸವದಿ, ಜಗದೀಶ್ ಶೆಟ್ಟರ್ ಭೇಟಿ ಮಾಡಿ ಡಿ ಕೆ ಶಿವಕುಮಾರ್ ಮನ ಓಲೈಕೆ?

ಕಳೆದ ಏಪ್ರಿಲ್ ನಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್​ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹಾಗೂ ಲಕ್ಷ್ಮಣ್​ ಸವದಿಗೆ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. 
ಜಗದೀಶ್ ಶೆಟ್ಟರ್-ಲಕ್ಷ್ಮಣ ಸವದಿ
ಜಗದೀಶ್ ಶೆಟ್ಟರ್-ಲಕ್ಷ್ಮಣ ಸವದಿ

ಬೆಂಗಳೂರು: ಕಳೆದ ಏಪ್ರಿಲ್ ನಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್​ ನಿರಾಕರಿಸಿದ ಕಾರಣ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹಾಗೂ ಲಕ್ಷ್ಮಣ್​ ಸವದಿಗೆ ಕಾಂಗ್ರೆಸ್ ಪಕ್ಷ ಸರ್ಕಾರದಲ್ಲಿ ಉನ್ನತ ಸ್ಥಾನಮಾನ ನೀಡುವ ಬಗ್ಗೆ ಚರ್ಚೆಯಾಗುತ್ತಿದೆ. 

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಲಕ್ಷ್ಮಣ ಸವದಿಯವರನ್ನು ಇಂದು ಬುಧವಾರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಖಾಸಗಿ ಕಾರ್ಯಕ್ರಮದ ನಿಮಿತ್ತ ರಾಜಮಂಡ್ರಿಗೆ ತೆರಳಲಿದ್ದು ಅಲ್ಲಿಂದ ಬಂದ ಬಳಿಕ ಮೊದಲಿಗೆ ಬೆಳಗಾವಿಯಲ್ಲಿ ಅಥಣಿ ವಿಧಾನಸಭಾ ಕ್ಷೇತ್ರದ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಸಂಪುಟ ದರ್ಜೆ ಸ್ಥಾನಮಾನ?: ಬಲ್ಲ ಮೂಲಗಳ ಪ್ರಕಾರ ಜಗದೀಶ್​ ಶೆಟ್ಟರ್​ರನ್ನು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಲಕ್ಷ್ಮಣ್​ ಸವದಿ ಅವರನ್ನು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮಾಡುವ ಸಾಧ್ಯತೆ ದಟ್ಟವಾಗಿದೆ.

ಉಭಯ ನಾಯಕರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡುವ ಕುರಿತಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ಶೆಟ್ಟರ್​ ಹಾಗೂ ಸವದಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ನಿನ್ನೆ ಕಾಣಿಸಿಕೊಂಡ ಶೆಟ್ಟರ್ ಯಾರೋ ಊಹಿಸಿದಂತೆ ನನ್ನ ಆತ್ಮವಿಶ್ವಾಸ ಕುಗ್ಗಿಲ್ಲ ಅಥವಾ ನಾನು ಖಿನ್ನತೆಗೆ ಒಳಗಾಗಿಲ್ಲ. ನಾನು ಚುನಾವಣೆಯಲ್ಲಿ ಸೋತರೂ ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಗೆಲುವು ಬಿಜೆಪಿ ಕೇಂದ್ರ ನಾಯಕತ್ವಕ್ಕೆ ಕಪಾಳಮೋಕ್ಷದಂತಾಗಿದೆ, ರಾಷ್ಟ್ರೀಯ ರಾಜಕೀಯದಲ್ಲಿ ಬದಲಾವಣೆಗೆ ಮುನ್ನುಡಿ ಆಗಲಿದೆ ಎಂದಿದ್ದಾರೆ.

ತಮ್ಮ ಸೋಲಿನಿಂದ ಪಕ್ಷದ ಕಾರ್ಯಕರ್ತರು ಹತಾಶರಾಗುವ ಅಗತ್ಯವಿಲ್ಲ. ತಾವು ವೈಯಕ್ತಿಕವಾಗಿ ಸೋತಿಲ್ಲ, ಆದರೆ ಬಿಜೆಪಿ ಕಟ್ಟಲು ಹರಸಾಹಸ ಮಾಡಿದ ತಮ್ಮ ಕುಟುಂಬದ ಹಿರಿಯರು ಸೋಲಿನ ರುಚಿ ಅನುಭವಿಸಿ ನಂತರ ಗೆಲುವು ಸಾಧಿಸಿದ್ದಾರೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com