ಡಿಕೆಶಿ ಬೆಂಬಲಗರಿಂದ ಮನೆಯ ಮುಂದೆ ಅಶ್ಲೀಲ ಪೋಸ್ಟರ್: ರಮೇಶ್ ಜಾರಕಿಹೊಳಿ ಆರೋಪ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.
ಮಾಜಿ ಸಚಿವ ರಮೇಶ್​ ಜಾರಕಿಹೊಳಿ
ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಸಿಡಿದೆದ್ದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಅಶ್ಲೀಲ ಬರಹದ ಪೋಸ್ಟರ್ ಅಂಟಿಸಿದ್ದಾರೆ.

ಡಿಕೆ ಶಿವಕುಮಾರ್ ನಿವಾಸದ ಹಿಂಭಾಗದಲ್ಲೇ ರಮೇಶ್ ಜಾರಕಿಹೊಳಿಯವರ ನಿವಾಸವಿದ್ದು, ಈ ನಿವಾಸದ ಮುಂದೆ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದಾರೆ.
 
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಮೇಶ್ ಜಾರಕಿಹೊಳಿಯವರು, ಡಿಕೆ ಶಿವಕುಮಾರ್ ಒಬ್ಬ ಪುಕ್ಕಲ, ಮೋಸಗಾರ, ಸಿಡಿ ಮಾಸ್ಟರ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಶಿವಕುಮಾರ್ ಅವರ ರಾಜಕೀಯ ಜೀವನ ಕಟ್ಟಿಕೊಳ್ಳಲು ರೌಡಿಸಂ ವೇದಿಕೆಯಾಗಿದೆ. ರಾಜ್ಯ ಸರ್ಕಾರದಿಂದ ನನಗೆ ಯಾವುದೇ ನ್ಯಾಯ ಸಿಗುವ ನಂಬಿಕೆಯಿಲ್ಲ. ಹೀಗಾಗಿ ಭದ್ರತೆ ಕೋರಿ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ವಾರ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನೆಯ ಮುಂದೆ ಅಟಿಸಲಾಗಿರುವ ಅಶ್ಲೀಲ ಪೋಸ್ಟರ್ ಕುರಿತು ಅವರ ಗಮನಕ್ಕೆ ತರುತ್ತೇನೆ. ಕಿಡಿಗೇಡಿಗಳು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ಡಿಕೆ.ಶಿವಕುಮಾರ್ ಅವರ ಬಳಿಯಿರುವ ರೌಡಿಗಳಾಗಿದ್ದಾರೆ. ಡಿಕೆ.ಶಿವಕುಮಾರ್ ದರೋಡೆಕೋರ ಕೊತ್ವಾಲ್ ರಾಮಚಂದ್ರನ ಶಿಷ್ಯನಾಗಿದ್ದಾರೆಂದು ಆರೋಪಿಸಿದರು.

ಪೋಸ್ಟರ್ ಸಂಬಂಧ ಪೊಲೀಸರಿಗೂ ದೂರು ನೀಡುತ್ತೇನೆ. ಪೋಸ್ಟರ್ ಅಂಟಿಸುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಶಾ ಅವರೊಂದಿಗಿನ ಭೇಟಿಯ ವೇಳೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಮತ್ತು ಶಾಸಕರು ಅಸುರಕ್ಷತೆ ಎದುರಿಸುತ್ತಿರುವ ಬಗ್ಗೆ ಚರ್ಚಿಸುತ್ತೇನೆಂದು ಹೇಳಿದರು.

ಇದೇ ವೇಳೆ ಸಿಡಿ ಪ್ರಕರಣ ಸಂಬಂಧ ಮಾತನಾಡಿ. ಸಿಡಿಯನ್ನು ರಷ್ಯಾ, ದುಬೈ ಮತ್ತು ಇಂಗ್ಲೆಂಡಿನಲ್ಲಿ ಬಿಡುಗಡೆ ಮಾಡಿರುವುದಾಗಿ ತಿಳಿದುಬಂದಿದೆ. ಪ್ರಕರಣನ್ನು ಸಿಐಡಿ ತನಿಖೆಗೆ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com