ರಾಜ್ಯ ಬಿಜೆಪಿಯಿಂದ ಕಾರ್ಪೊರೇಟರ್‌ಗಳಿಗೆ ಓರಿಯಂಟೇಶನ್ ಶಿಬಿರ

ಕರ್ನಾಟಕ ಹಾಗೂ ದೇಶದ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಲು ಬಿಜೆಪಿಯು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಸದಸ್ಯರಿಗೆ ಎರಡು ದಿನಗಳ ಓರಿಯಂಟೇಶನ್ ಕಾರ್ಯಕ್ರಮ ಹಮ್ಮಿಕೊಂಡಿದೆ. 
ಬಿಜೆಪಿ ನಾಯಕರು
ಬಿಜೆಪಿ ನಾಯಕರು

ಹುಬ್ಬಳ್ಳಿ: ಕರ್ನಾಟಕ ಹಾಗೂ ದೇಶದ ರಾಜಕೀಯ ವಿದ್ಯಮಾನಗಳ ಕುರಿತು ಮಾಹಿತಿ ನೀಡಲು ಬಿಜೆಪಿಯು ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಸದಸ್ಯರಿಗೆ ಎರಡು ದಿನಗಳ ಓರಿಯಂಟೇಶನ್ ಕಾರ್ಯಕ್ರಮ ಹಮ್ಮಿಕೊಂಡಿದೆ. 

ಹುಬ್ಬಳ್ಳಿಯಲ್ಲಿ ಶುಕ್ರವಾರದಿಂದ ಎರಡು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯದ ಏಳು ಮಹಾನಗರ ಪಾಲಿಕೆಗಳ 197 ಕಾರ್ಪೊರೇಟರ್‌ಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಬಿ.ಎಲ್. ಸಂತೋಷ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.

ಕಾರ್ಯಕ್ರಮದ ಅಜೆಂಡಾವನ್ನು ವಿವರಿಸಿದ ಶಾಸಕ ಅರವಿಂದ್ ಬೆಲ್ಲದ್, ಮುಂಬರುವ ಸಾರ್ವತ್ರಿಕ ಚುನಾವಣೆ ಸೇರಿದಂತೆ ಯಾವುದೇ ನಿರ್ದಿಷ್ಟ ಉದ್ದೇಶವಿಲ್ಲದೆ ಪಕ್ಷದ ಪ್ರತಿಯೊಂದು ವಿಭಾಗ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ನಡೆಸಲಾಗುವ ವಾಡಿಕೆ ಕಾರ್ಯಕ್ರಮ ಇದಾಗಿದೆ. ಪಕ್ಷದ ಹಿರಿಯ ನಾಯಕರು ಆರು ವಿವಿಧ ಸೆಷನ್ ನಗಳಲ್ಲಿ ಕಾರ್ಪೊರೇಟರ್‌ಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.

ರಾಜ್ಯದಲ್ಲಿನ ಆರ್ಥಿಕ ಸ್ಥಿತಿ ಮತ್ತು ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಮತ್ತು ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಐದು ಭರವಸೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾದ ಬಗ್ಗೆ ವಿವರಿಸಲಾಗುವುದು. ಖಾತರಿಗಳ ಅನುಷ್ಠಾನದಲ್ಲಿ ಸರ್ಕಾರ ವಿಫಲವಾಗಿರುವುದರಿಂದ ಹೆಚ್ಚಿನ ಜನರಿಗೆ ಅದರ ಲಾಭ ಸಿಕ್ಕಿಲ್ಲ. ಇದನ್ನು ಅವರಿಗೆ ತಿಳಿಸಲಾಗುವುದು ಎಂದು ಶಾಸಕರು ಹೇಳಿದ್ದಾರೆ.

ನರೇಂದ್ರ ಮೋದಿ ಸರ್ಕಾರ ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ ದೇಶದಲ್ಲಿ ಮಾಡಿದ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಗಳು ಮತ್ತು ಎನ್‌ಡಿಎ ಆಡಳಿತದ ಕಲ್ಯಾಣ ಕಾರ್ಯಕ್ರಮಗಳು ಹೇಗೆ ಬಡವರಿಗೆ ಲಾಭದಾಯಕವಾಗಿವೆ ಎಂಬುದರ ಕುರಿತು ಮತ್ತೊಂದು ಪ್ರಮುಖ ಸೆಷನ್ ನಲ್ಲಿ ಮಾಹಿತಿ ನೀಡಲಾಗುವುದು ಎಂದು ಬೆಲ್ಲದ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com