ಶೀಘ್ರದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ: ಬಂಡೆಪ್ಪ ಕಾಶೆಂಪೂರ್

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಬಂಡೆಪ್ಪ ಕಾಶೆಂಪೂರ್ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ.
ಬಂಡೆಪ್ಪ ಕಾಶೆಂಪೂರ್
ಬಂಡೆಪ್ಪ ಕಾಶೆಂಪೂರ್
Updated on

ಬೆಂಗಳೂರು: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಸದಸ್ಯ ಬಂಡೆಪ್ಪ ಕಾಶೆಂಪೂರ್ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶೀಘ್ರದಲ್ಲೇ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಸರ್ಕಾರ ಪತನಗೊಳ್ಳಲು ನಾವು ಏನನ್ನೂ ಮಾಡಬೇಕಾಗಿಲ್ಲ. ಅದು ತನ್ನಷ್ಟಕ್ಕೆ ತಾನೇ ಪತನವಾಗಲಿದೆ ಎಂದು ಹೇಳಿದರು.

‘ಕರ್ನಾಟಕದಲ್ಲಿ 75 ಲಕ್ಷ ರೈತರಿದ್ದು, ಅವರೆಲ್ಲರೂ ಸಂಕಷ್ಟದಲ್ಲಿದ್ದಾರೆ. ಸರ್ಕಾರ ನಿಜವಾಗಿಯೂ ಅವರಿಗೆ ಸಹಾಯ ಮಾಡಲು ಬಯಸಿದರೆ, ಮಾಡಲು ಸಾಧ್ಯವಿದೆ. ಇದಕ್ಕೆ ಮಾಡಬೇಕಿರುವುದು ಇಷ್ಟೇ ಅವರು ಬೆಂಗಳೂರಿನ ಸುತ್ತಮುತ್ತಲಿನ ಅತಿಕ್ರಮಣವಾದಿರುವ ಶೇ.10ರಷ್ಟು ಸರ್ಕಾರಿ ಭೂಮಿಯನ್ನು ವಸೂಲಿ ಮಾಡಿದರೆ ಸಾಕು.

ಈ ಮೂಲಕ ಸರ್ಕಾರವು 25,000 ಕೋಟಿ ಗಳಿಸಿ ರೈತರಿಗೆ ವಿತರಿಸಬಹುದು. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಿದರೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನಾವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ನಾವು ಯಾವ ಸ್ಥಾನದಿಂದ ಸ್ಪರ್ಧಿಸುತ್ತೇವೆ ಎಂಬುದು ಪಕ್ಷದ ನಾಯಕತ್ವಕ್ಕೆ ಗೊತ್ತಿದೆ. ಜೆಡಿಎಸ್ ವರಿಷ್ಠರು ಬಿಜೆಪಿ ಜೊತೆ ಮಾತುಕತೆ ನಡೆಸಿ ಸ್ಥಾನಗಳನ್ನು ನಿರ್ಧರಿಸಲಿದ್ದಾರೆಂದು ಹೇಳಿದರು.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಾಗ ಕಾಂಗ್ರೆಸ್‌ಗೆ ಮತಗಳ ನೀಡುವಲ್ಲಿ ಜೆಡಿಎಸ್ ವಿಫಲವಾಗಿತ್ತು ಎಂಬ ಪ್ರತಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಹೆಚ್ಚಿನ ಕ್ಷೇತ್ರಗಳಲ್ಲಿ ನಮ್ಮ ನೇರ ಪ್ರತಿಸ್ಪರ್ಧಿ ಕಾಂಗ್ರೆಸ್ ಆಗಿತ್ತು. ಹೀಗಾಗಿ ಅವರಿಗೇ ಮತಗಳನ್ನು ನೀಡಲು ಸಾಧ್ಯವಾಗಲಿಲ್ಲ. ಕಾಂಗ್ರೆಸ್ ಹೈಕಮಾಂಡ್ ಮೈತ್ರಿಯನ್ನು ಬಯಸಿತ್ತು. ಆದರೆ, ರಾಜ್ಯದ ನಾಯಕರು ಅದನ್ನು ಬಯಸಿರಲಿಲ್ಲ. 2018ರಲ್ಲಿ ಜೆಡಿಎಸ್‌ಗೆ ಬಿಜೆಪಿ ಜತೆ ಹೋಗುವ ಅವಕಾಶವಿತ್ತು. ಅಂದು ಬಿಜೆಪಿಯೊಂದಿಗೆ ಕೈಜೋಡಿಸಿದ್ದರೆ, ಇಂದು ಕಾಂಗ್ರೆಸ್ ಅಧಿಕಾರದಲ್ಲಿ ಇರುತ್ತಿರಲಿಲ್ಲ ಎಂದರು.

ಇದೇ ವೇಳೆ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಕುರಿತು ಸಿ.ಎಂ.ಇಬ್ರಾಹಿಂ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಚುನಾವಣೆ ನಂತರ ಅವರ ವರ್ತನೆ ಬದಲಾಯಿತು. ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳುವಾಗ ಸಿಎಂ ಇಬ್ರಾಹಿಂ ಸಭೆಯಲ್ಲೇ ಹಾಜರಿದ್ದರು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com