ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಕೆಪಿಎಸ್'ಸಿ ಪರೀಕ್ಷೆ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ: ಜೆಡಿಎಸ್

ಕೆಪಿಎಸ್‌ಸಿ ಪರೀಕ್ಷೆ ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.
Published on

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ ವೇಳೆ ಮಹಿಳೆಯರ ತಾಳಿ, ಕಾಲುಂಗುರ ತೆಗೆಸಿರುವುದು ಅಕ್ಷಮ್ಯ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ಗಳನ್ನು ಮಾಡಿರುವ ಜೆಡಿಎಸ್, ಇಂತಹ ಕೃತ್ಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.

ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ?

ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ?

ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ. ಒಂದೆಡೆ ಗೃಹಲಕ್ಷ್ಮಿ ಎನ್ನುವ ರಾಜ್ಯ ಸರಕಾರ, ಇನ್ನೊಂದೆಡೆ ಅದೇ ಗೃಹಲಕ್ಷ್ಮಿಯರ ಸೌಭಾಗ್ಯ ಮತ್ತು ಸಾಂಸ್ಕೃತಿಕ, ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟು ಮಾಡುತ್ತಿದೆ. ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ?

ಇಷ್ಟಕ್ಕೂ ಪರೀಕ್ಷಾ ಸಿಬ್ಬಂದಿಗೆ ಮಹಿಳಾ ಅಭ್ಯರ್ಥಿಗಳ ತಾಳಿ, ಕಾಲುಂಗುರ ತೆಗೆಸುವಂತೆ ಆದೇಶ ಕೊಟ್ಟವರು ಯಾರು? ಅವರಿಗೆ ಅಷ್ಟೊಂದು ಸೂಕ್ಷ್ಮಪ್ರಜ್ಞೆಯ ಕೊರತೆಯೇ? ಪರೀಕ್ಷೆಗೆ ಮೊದಲೇ ಆ ಮಹಿಳೆಯರಿಗೆ ಅದೆಷ್ಟು ಮಾನಸಿಕ ಆಘಾತ ಉಂಟಾಗುತ್ತದೆ ಎಂಬ ಅರಿವು ಬೇಡವೇ?...ಪರೀಕ್ಷಾ ನಿಯಮಗಳ ಪಟ್ಟಿಯಲ್ಲಿ ಕಾಲುಂಗುರ, ಮಂಗಳಸೂತ್ರ ತೆಗೆಯಬೇಕು ಎನ್ನುವ ಸೂಚನೆಯೇ ಇರಲಿಲ್ಲ ಎನ್ನುತ್ತಾರೆ ಪರೀಕ್ಷಾರ್ಥಿಗಳು. ಹಾಗಾದರೆ, ಪರೀಕ್ಷಾ ಕೇಂದ್ರಕ್ಕೆ ಬಂದ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರವನ್ನು ಬಲವಂತವಾಗಿ ತೆಗೆಸಿದ್ದು ದುರ್ನಡತೆತ ಪರಮಾವಧಿ.

ಕೆಪಿಎಸ್ಸಿ ಹಾಗೂ ರಾಜ್ಯ ಸರಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಬೇಕು ಹಾಗೂ ಇಂಥ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com