ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು...
ಶ್ರೀನಿವಾಸ್ ಪ್ರಸಾದ್
ಶ್ರೀನಿವಾಸ್ ಪ್ರಸಾದ್

ಮೈಸೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ವಿ.ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ, ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದರು. 

ಮಾರ್ಚ್ 17, 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com